+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

“ಸಂಸ್ಕಾರಯುತ ಶಿಕ್ಷಣ ಭವಿಷ್ಯವನ್ನು ಬದಲಾಯಿಸುತ್ತದೆ” ಒಡಿಯೂರು ಶ್ರೀ ಗುರುದೇವ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ

ಕನ್ಯಾನ: “ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವ ಉತ್ತಮ ವೇದಿಕೆ. ಕೌಶಲ್ಯ ಭರಿತ ಶಿಕ್ಷಣದೊಂದಿಗೆ ಸ್ವಾವಲಂಬಿಯಾಗಿ ಬದುಕಬೇಕು. ಉತ್ತಮ ಗುಣಮಟ್ಟದ ಉದ್ಯೋಗ ಇದ್ದರೆ ಅವನ ಬದುಕು ಬದಲಾಗುತ್ತದೆ. ಅದರ ಜೊತೆಗೆ ದೇಶ ಕಟ್ಟುವ ಕಾಯಕವು ನಮ್ಮದಾಗಬೇಕು. ದೇಶ ಉಳಿದರೆ ನಾವು ಉಳಿಯುತ್ತೇವೆ. ಸಂಸ್ಕಾರಯುತ ಶಿಕ್ಷಣ ಭವಿಷ್ಯವನ್ನು ಬದಲಾಯಿಸುತ್ತದೆ. ಬದುಕನ್ನು ಕಲೆಯಾಗಿಸಿ ಜೀವನದಲ್ಲಿ ಯಶಸ್ವಿಯಾಗಿ” ಎಂದು ಹಾರೈಸಿದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕನ್ಯಾನ ಇದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳ ಬಹುಮಾನ ಹಾಗೂ ಅಲ್ಪಾವಧಿ ವೃತ್ತಿಯಾದ ಟೈಲರಿಂಗ್ ಕೋರ್ಸಿನ ಪ್ರಮಾಣ ಪತ್ರ ವಿತರಿಸಿ ಆಶೀರ್ವಚನಗೈದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ಅವರು ಆಶೀರ್ವಚನ ನೀಡಿ “ಸ್ವಾವಲಂಬನೆಯ ಮೂಲಕ ಉದ್ಯೋಗವನ್ನು ಪಡೆಯುವ ಜೊತೆಗೆ ಮಾನವೀಯ ಮೌಲ್ಯವನ್ನು ಅಳವಡಿಸಿಕೊಂಡು ಪರೋಪಕಾರದ ಜೀವನ ನಡೆಸಬೇಕು. ಸದ್ವಿಚಾರದ ಮೂಲಕ ಜೀವನದಲ್ಲಿ ಮುನ್ನಡೆಯಿರಿ” ಎಂದು ಶುಭಹಾರೈಸಿದರು.
ಮುಖ್ಯ ಅತಿಥಿಗಳಾದ ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಗೋಪಿನಾಥ ಶೆಟ್ಟಿ ಅವರು ಮಾತನಾಡುತ್ತಾ “ಐ.ಟಿ.ಐ ಶಿಕ್ಷಣದ ಬಗ್ಗೆ ಕೀಳರಿಮೆ ಬೇಡ. ಐ.ಟಿ.ಐ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಲಭಿಸುತ್ತಾ ಇವೆ. ಪೂಜ್ಯ ಸ್ವಾಮೀಜಿಯವರ ಆಡಳಿತದ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಇನ್ನೋರ್ವ ಅತಿಥಿ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢ ಶಾಲೆಯ ಆಡಳಿತ ವ್ಯವಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್ ಮಾತನಾಡುತ್ತಾ “ಶಿಕ್ಷಣ ಸಂಸ್ಥೆಯನ್ನು ನಡೆಸುವ ವಿಚಾರಗಳ ಬಗ್ಗೆ ಮೆಲುಕು ಹಾಕುತ್ತಾ ಅಲ್ಪಾವಧಿಯಲ್ಲಿ ಈ ಸಂಸ್ಥೆಯು ಇಷ್ಟು ಸಾಧನೆ ಮಾಡಿ ಉತ್ತಮ ರೀತಿಯಲ್ಲಿ ಬೆಳೆದು ಬಂದ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪೇಟೆ, ಪಟ್ಟಣಗಳಿಗೆ ಹೋಗಿ ವಿದ್ಯಾರ್ಜನೆ ಮಾಡುವುದಕ್ಕಿಂತ ಭಾರತೀಯ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಇಂತಹ ಸಂಸ್ಥೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡೋಣ” ಎಂದರು.
ಮತ್ತೋರ್ವ ಅತಿಥಿ ಪ್ರಭಾತ್ ಸ್ಕಿಲ್‍ನ ವ್ಯವಸ್ಥಾಪಕರಾದ ಶ್ರೀ ಸತ್ಯೇಂದ್ರಪ್ರಕಾಶ ಮಾತನಾಡುತ್ತಾ “ವಿಶ್ವದಲ್ಲಿ ಅತೀ ಹೆಚ್ಚು ಯುವಜನತೆ ಹೊಂದಿರುವ ಭಾರತದಲ್ಲಿ ಕೌಶಲ್ಯರಾಗಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಹೊಂದಿ ದೇಶವನ್ನು ತಾಂತ್ರಿಕವಾಗಿ ಮುನ್ನಡೆಯುವಂತೆ ಮಾಡುವ ಅನಿವಾರ್ಯತೆ ಇದೆ. ಭಾರತ ಸರಕಾರದ ಹಲವು ಯೋಜನೆಗಳಿದ್ದು ಅದನ್ನು ಉಪಯೋಗಿಸಿಕೊಂಡು ಕೌಶಲ್ಯಭರಿತರಾಗಿ” ಎಂದು ಹಾರೈಸಿದರು.
ಕನ್ಯಾನ ಗ್ರಾಮ ಪಂಚಾಯತ್‍ನ ಸದಸ್ಯ ಶ್ರೀ ಕೆ.ಪಿ. ರಘುರಾಮ ಶೆಟ್ಟಿ ಇವರು ಉಪಸ್ಥಿತರಿದ್ದರು.
ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಯಾದ ಶ್ರೀ ಪ್ರವೀಣ ಕುಮಾರ ಎನ್. ಇವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಪ್ರಾಚಾರ್ಯರಾದ ಶ್ರೀ ಕರುಣಾಕರ ಎನ್.ಬಿ. ಇವರು ವಾರ್ಷಿಕ ವರದಿಯನ್ನು ವಾಚಿಸಿದರು.
ತರಬೇತುದಾರರಾದ ಶ್ರೀ ಅಶ್ವಥ್ ವಂದಿಸಿ, ಶ್ರೀ ಜಯಂತ್ ಆಜೇರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

 

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top