“ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಆ ಮೂಲಕ ಧರ್ಮಪ್ರಜ್ಞೆಯೊಂದಿಗೆ ರಾಷ್ಟç ಕಟ್ಟುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಮಕ್ಕಳಲ್ಲಿ ರಾಷ್ಟ್ರಪ್ರಜ್ಞೆಯನ್ನು ಬೆಳೆಸುವ ಕಾರ್ಯದ ಅನಿವಾರ್ಯತೆ ಇದೆ. ಮಕ್ಕಳು ತಮ್ಮನ್ನು ತಾವೇ ರೂಪಿಸುವ ಶಿಲ್ಪಿಗಳಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನಗೈದರು.
ಪ್ರಾರಂಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಸುಧಾ, ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಚಂದ್ರಶೇಖರ್, ಮುಂಬೈ ಉದ್ಯಮಿ ಶ್ರೀ ವಾಮಯ್ಯ ಬಿ. ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ ಘಟಕದ ಅಧ್ಯಕ್ಷೆ ಶ್ರೀಮತಿ ರೇವತಿ ವಿ. ಶೆಟ್ಟಿ, ಹಿರಿಯ ಪತ್ರಕರ್ತರಾದ ಯಶವಂತ ವಿಟ್ಲ, ಮಂಗಳೂರಿನ ಶ್ರೀಮತಿ ಗೀತಾ ಭರತ್‌ಭೂಷಣ್, ಪುಣೆಯ ಶ್ರೀ ವಿಠ್ಠಲ್ ರೈ, ಮಾತೃಮಂಡಳಿಯ ಸಂಚಾಲಕಿ ಶ್ರೀಮತಿ ವಿದ್ಯಾಲಕ್ಷ್ಮೀ ಡಿ. ಉಪಸ್ಥಿತರಿದ್ದರು.
ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಗುರುಬಂಧುಗಳಾದ ಶ್ರೀಮತಿ ಕಲ್ಪನಾ ಕೃಷ್ಣ ಶೆಟ್ಟಿ ಅವರು ಧ್ವಜಾರೋಹಣಗೈದರು.
ಬಳಿಕ ಕ್ರಮವಾಗಿ ಗುರುದೇವ ಗುರುಕುಲದಿಂದ ತೊಡಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಶಾಲಾ ಸಂಚಾಲಕ ಶ್ರೀ ಸೇರಾಜೆ ಗಣಪತಿ ಭಟ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್. ರೈಯವರು ವರದಿವಾಚಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಕು| ಸವಿತಾ ಕಾರ್ಯಕ್ರಮ ನಿರೂಪಿಸಿ, ಕು| ಗಂಗಾ ಹಾವೇರಿ ಧನ್ಯವಾದವಿತ್ತರು.