ಜ.30 ಮತ್ತು 31ರಂದು ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ
Date : Wednesday, 18-01-2023
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜನವರಿ 30 ಮತ್ತು 31ರಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ, ಸಾಹಿತಿ, ಕವಿ ಡಾ. ವಸಂತಕುಮಾರ ಪೆರ್ಲ ಇವರ ಅಧ್ಯಕ್ಷತೆಯಲ್ಲಿ ಎರಡು ದಿನ ತುಳು ಸಾಹಿತ್ಯ ಸಮ್ಮೇಳನವು ಈ ಸುಸಂದರ್ಭ ನಡೆಯಲಿದೆ. ಜ.30ರಂದು ಬೆಳಿಗ್ಗೆ ತುಳು ಸಾಹಿತ್ಯ ಸಮ್ಮೇಳನವನ್ನು ಪೂಜ್ಯ ಶ್ರೀಗಳವರು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಅಖಿಲ […]