ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು: ಒಡಿಯೂರು ಶ್ರೀ ಆಶೀರ್ವಚನ
Date : Sunday, 18-12-2022
“ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಆ ಮೂಲಕ ಧರ್ಮಪ್ರಜ್ಞೆಯೊಂದಿಗೆ ರಾಷ್ಟç ಕಟ್ಟುವ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಮಕ್ಕಳಲ್ಲಿ ರಾಷ್ಟ್ರಪ್ರಜ್ಞೆಯನ್ನು ಬೆಳೆಸುವ ಕಾರ್ಯದ ಅನಿವಾರ್ಯತೆ ಇದೆ. ಮಕ್ಕಳು ತಮ್ಮನ್ನು ತಾವೇ ರೂಪಿಸುವ ಶಿಲ್ಪಿಗಳಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನಗೈದರು. ಪ್ರಾರಂಭದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿಯವರು ದೀಪೋಜ್ವಲನೆಗೈದು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಸುಧಾ, ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್‌ನ […]