ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಮಹಾತ್ಮಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಸೇರಾಜೆ ಗಣಪತಿಭಟ್ ಮಹಾನ್ ಚೇತನರ ಛಾಯಾಚಿತ್ರಗಳಿಗೆ ಪುಷ್ಪವನ್ನು ಅರ್ಚಿಸುವುದರ ಮೂಲಕ ಗೌರವವನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ ಶೆಟ್ಟಿ ನುಡಿನಮನವನ್ನು ಸಲ್ಲಿಸಿದರು.ಶಾಲಾ ಶಿಕ್ಷಕರು ಮತ್ತು ಮಕ್ಕಳು ಕಾರ್ಯ ಕ್ರಮದಲ್ಲಿ ಭಾಗವಹಿಸಿದರು.