+91 8255-266211
info@shreeodiyoor.org

ಬದಲಾವೊಂದುಪ್ಪಿ ತುಳು ಬದ್ಕ್ ಗೋಷ್ಠಿ

ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿ ಹಾಗೂ ಸಮ್ಮೇಳಾನಧ್ಯಕ್ಷ ಡಾ| ಕನರಾಡಿ ವಾದಿರಾಕ ಭಟ್ ಇವರ ಉಪಸ್ಥಿತಿಯಲ್ಲಿ ’ಬದಲಾವೊಂದುಪ್ಪಿ ತುಳು ಬದ್ಕ್’ ಗೋಷ್ಠಿಯು ನೆಹರೂ ಸ್ಮಾರಕ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ| ಪೂವಪ್ಪ ಕಣಿಯೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಂಗಳೂರಿನ ಶ್ರೀ ಯು.ಬಿ. ಪವನಜ, ಆಳ್ವಾಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುಧಾರಾಣಿ ಮತ್ತು ಮಂಗಳೂರು ಶ್ರೀ ರಾಮಕೃಷ್ಣ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕಿಶೋರ್‌ಕುಮಾರ್ ರೈ ಶೇಣಿ ಅಭಿಪ್ರಾಯ ಮಂಡಿಸಿದರು.

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಉಡುಪಿ ವಕಯಾಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಯೋಜನೆಯ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಶ್ರೀ ನವೀನ್ ಶೆಟ್ಟಿ ವಂದಿಸಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಶ್ರೀ ಡಿ.ಎಂ.ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top