+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಪುಸ್ತಕ ಕೊಡುಗೆ

ಒಡಿಯೂರು ಶ್ರೀ ಯುವ ಸೇವಾಬಳಗ, ಮುಂಬೈ ಘಟಕದ ವತಿಯಿಂದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಗ್ರಂಥಾಲಯಕ್ಕೆ ಹಲವು ನೀತಿಕಥೆಗಳ, ಮೌಲಿಕ ಪುಸ್ತಕಗಳು, ವಿಜ್ಞಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಯುವಸೇವಾ ಬಳಗದ ಅಧ್ಯಕ್ಷ ಡಾ. ಅದೀಪ್ ಶೆಟ್ಟಿಯವರು ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ರೇಣುಕಾ ಎಸ್. ರೈ, ಒಡಿಯೂರು ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಹಿರಿಯ ಪತ್ರಕರ್ತ ಯಶವಂತ ವಿಟ್ಲ, ಮುಂಬೈನ ಶ್ರೀಮತಿ ಕಲ್ಪನಾ ಕೆ. ಶೆಟ್ಟಿ ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top