+91 8255-266211
info@shreeodiyoor.org

ಇಂಜಿನಿಯರ್ಸ್ ಡೇ ಆಚರಣೆ

“ಸಾಮಥ್ರ್ಯ, ದಕ್ಷತೆ, ಶಿಸ್ತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ. ಉತ್ತಮ ತರಬೇತಿಯಿಂದ ಸಂಸ್ಥೆಯ ಗುಣಮಟ್ಟವು ಹೆಚ್ಚಾಗುವುದರ ಜೊತೆಗೆ ವಿದ್ಯಾರ್ಥಿಗಳು ಜ್ಞಾನವಂತರಾಗುತ್ತಾರೆ” ಎಂದು ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಕನ್ಯಾನದಲ್ಲಿ ಆಯೋಜಿಸಲಾದ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಸರ್ ಎಂ. ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಶೀರ್ವಚನಗೈದರು.

ಮುಖ್ಯ ಅತಿಥಿಗಳಾದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಸೇರಾಜೆ ಗಣಪತಿ ಭಟ್ ಅವರು ಮಾತನಾಡುತ್ತಾ “ವಿಶ್ವೇಶ್ವರಯ್ಯನವರು ಕೇವಲ ತಾಂತ್ರಿಕ ವಿಚಾರಕ್ಕೆ ಮಾತ್ರ ಪ್ರಾಮುಖ್ಯತೆ ಕೊಡದೆ ಕೃಷಿಗೆ ಕೂಡ ಹೆಚ್ಚಿನ ಪ್ರಾಶಸ್ತ್ಯ ನೀಡಿದವರು. ನಮ್ಮ ಶಿಸ್ತು ಜೀವನದ ಮೌಲ್ಯಗಳ ಔನತ್ಯವನ್ನು ಹೆಚ್ಚಿಸುತ್ತದೆ ಹಾಗೂ ಸ್ವಾವಲಂಬಿಯಾಗಿ ಬದುಕಲು ಕೈಗಾರಿಕಾ ತರಬೇತಿ ಸಂಸ್ಥೆ ಸಹಕಾರಿಯಾಗಲಿ” ಎಂದು ಶುಭ ಹಾರೈಸಿದರು.

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕರಾದ ಟಿ. ತಾರಾನಾಥ ಕೊಟ್ಟಾರಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಇಂಜಿನಿಯರ್ಸ್ ಡೇಯ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಪ್ರಾಚಾರ್ಯರಾದ ಕರುಣಾಕರ ಎನ್.ಬಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರಂಜಿತ್ ಬಿ. ವಂದಿಸಿದರು. ಸಲ್ಮಾನ್ ಫಾರಿಸ್ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top