+91 8255-266211
info@shreeodiyoor.org

ಪ್ರವೇಶೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

 

 

“ಬದುಕನ್ನು ನಾವು ಪ್ರೀತಿಸಬೇಕು; ಆಗ ಬದುಕು ನಮ್ಮನ್ನು ಪ್ರೀತಿಸುತ್ತದೆ. ಈ ಬಗ್ಗೆ ಚಿಂತನೆ ಮಾಡಿದರೆ ಆದರ್ಶ ಬದುಕು ನಮ್ಮದಾಗುತ್ತದೆ. ವಿದ್ಯೆಯೆ ಶ್ರೇಷ್ಠವಾದ ಸಂಪತ್ತು. ವಿದ್ಯೆಯೊಂದಿಗೆ ವಿನಯವು ಮನೆ ಮಾಡಿರಬೇಕು. ಬದುಕು ಕೌಶಲ್ಯಯುತವಾಗಿದ್ದು, ‘ಸ್ಕಿಲ್’ ಎಂಬುದು ‘ಸ್ಟಿಲ್’ ಆಗಿರದೆ ನಿರಂತರತೆಯಿಂದರಲಿ. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೆ ಆದರ್ಶವಾಗಿರಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ಐ.ಟಿ.ಐ.ನ 2019-20ನೇ ಸಾಲಿನ ಪ್ರವೇಶೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಆಶೀರ್ವಚನಗೈದರು.
ಸಾಧ್ವಿ ಶ್ರೀ ಮಾತಾನಂದಮಯಿಯವರು “ವ್ಯಕ್ತಿ ಸರಿಯಾಗಿ ಸಂಸ್ಕಾರಯುತ ಪ್ರಾಮಾಣಿಕತೆಯ ವ್ಯಕ್ತಿತ್ವವನ್ನು ಬೆಳೆಸಿಕೊಂಡರೆ ಅದು ರಾಷ್ಟ್ರದ ಸಂಪತ್ತಾಗುತ್ತದೆ. ಉತ್ತಮ ನಡವಳಿಕೆಗಳನ್ನು ಜೀವನದಲ್ಲಿ ಅಳವಡಿಸಿದಾಗ ತನ್ನಿಂದ ತಾನೆ ಸಮೃದ್ಧ ಸಮಾಜ ನಿರ್ಮಾಣವಾಗುತ್ತದೆ. ಯಾಂತ್ರಿಕ ಯುಗಕ್ಕೆ ನಮ್ಮ ಬದುಕನ್ನು ಹೊಂದಿಕೊಂಡು ಜೀವಿಸುವುದು ಅನಿವಾರ್ಯವಾಗಿದೆ” ಎಂದು ಆಶೀರ್ವಚನಗೈದು ಐ.ಟಿ.ಟಿ.ಯ ಪ್ರಾಂಶುಪಾಲರು, ತರಬೇತುದಾರರ ಕ್ರಿಯಾಶೀಲ ಮತ್ತು ಶ್ರದ್ಧೆಯ ಸೇವೆಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿ ಆರ್.ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಲ|| ಎ. ಸುರೇಶ್ ರೈ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕರಾದ ಶ್ರೀ ಗಣಪತಿ ಭಟ್ ಸೇರಾಜೆ, ಮುಖ್ಯೋಪಾಧ್ಯಾಯರಾದ ಶ್ರೀ ಎ. ಜಯಪ್ರಕಾಶ ಶೆಟ್ಟಿ, ಹಿರಿಯ ಪತ್ರಕರ್ತರಾದ ಶ್ರೀ ಯಶವಂತ ವಿಟ್ಲ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಶ್ರೀ ಲಿಂಗಪ್ಪ ಗೌಡ ಪನೆಯಡ್ಕ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕರ ಶ್ರೀ ಪದ್ಮನಾಭ ಒಡಿಯೂರು ಮುಂತಾದವರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ ತರಬೇತು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ಪೂಜ್ಯ ಶ್ರೀಗಳವರು ವಿತರಿಸಿದರು. ಐ.ಟಿ.ಐ.ಯ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೂತನವಾಗಿ ಪ್ರವೇಶಪಡೆದ ವಿದ್ಯಾರ್ಥಿಗಳಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಕರುಣಾಕರ ಎನ್.ಬಿ. ಪ್ರಸ್ತಾವನೆಗೈದು, ಸಿಬ್ಬಂದಿ ಶ್ರೀ ಮೋಹನ್ ಸ್ವಾಗತಿಸಿದರು, ಶ್ರೀ ಪ್ರವೀಣ್ ಕುಮಾರ್ ವಂದಿಸಿದರು. ಶ್ರೀ ಜಯಂತ ಆಜೇರುರವರು ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top