+91 8255-266211
info@shreeodiyoor.org

ಪೂಜ್ಯ ಶ್ರೀ ಗಳವರ ಜನ್ಮದಿನೋತ್ಸವ – ಗ್ರಾಮೋತ್ಸವ

 

ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇದರ ವತಿಯಿಂದ ಜುಲೈ 29ರಂದು ಜರಗುವ ಪೂಜ್ಯ ಶ್ರೀ ಗಳವರ ಜನ್ಮದಿನೋತ್ಸವ-ಗ್ರಾಮೋತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ದಿನಾಂಕ 15/07/2019ನೇ ಸೋಮವಾರ ಶ್ರೀ ಗುರುದೇವ ವಿದ್ಯಾಪೀಠ ಒಡಿಯೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಪ್ರೌಢಶಾಲಾ 8,9,10 ನೇ ತರಗತಿಯ ವಿದ್ಯಾರ್ಥಿಗಳಿಗೆ ನಾನು ಮತ್ತು ಭಾರತ, ಸ್ವಚ್ಛ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಸಂಸ್ಕಾರಯುತ ಶಿಕ್ಷಣದಿಂದ ಭವ್ಯಭಾರತದ ನಿರ್ಮಾಣ ಎಂಬ ವಿಷಯಗಳಲ್ಲಿ ಒಂದು ವಿಷಯವನ್ನು ಸ್ಥಳದಲ್ಲಿ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗುವುದು. ಒಂದು ಶಾಲೆಯಿಂದ ಒಂದು ವಿದ್ಯಾರ್ಥಿಗೆ ಮಾತ್ರ ಭಾಗವಹಿಸುವ ಅವಕಾಶವಿದ್ದು ಶಾಲಾ ಮುಖ್ಯಶಿಕ್ಷಕರ ದೃಢೀಕರಣ ಪತ್ರದೊಂದಿಗೆ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಭಾಗವಹಿಸಬೇಕು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top