+91 8255-266211
info@shreeodiyoor.org

ಹೊರಾಂಗಣ ಸ್ಪರ್ಧೆ ಉದ್ಘಾಟನೆ

 

“ಆತ್ಮವಿಶ್ವಾಸವನ್ನು ಹೆಚ್ಚಿಸಲು ಕ್ರೀಡಾಕೂಟಗಳು ಉಪಯುಕ್ತವಾಗಿವೆ. ಗ್ರಾಮೋತ್ಸವದ ಹಿಂದೆ ಸ್ವಾರ್ಥರಹಿತ ಸೇವೆಯ ಬಹುದೊಡ್ಡ ಕಲ್ಪನೆ ಇದೆ. ಮನಸ್ಸಿನಲ್ಲಿ ಸ್ವಚ್ಛತೆಯ ಕಲ್ಪನೆ ಬರುವವರೆಗೆ ಸ್ವಚ್ಛ ಭಾರತ ಸಾಕಾರಗೊಳ್ಳುವುದು ಕಷ್ಟ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಆಲೋಚಿಸಿ ಮುನ್ನಡೆಯಬೇಕು. ಪ್ರಕೃತಿ ಮೇಲೆ ದಬ್ಬಾಳಿಕೆಯಿಂದ ಆಪತ್ತು ನಿಶ್ಚಿತ. ಒಂದು ಭಾಗವನ್ನು ಉಳಿಸಲು ಇನ್ನೊಂದು ಭಾಗಕ್ಕೆ ತೊಂದರೆ ಮಾಡುವುದು ಸರಿಯಲ್ಲ. ಧರ್ಮ ಸಂರಕ್ಷಣೆ ಕಾರ್ಯ ನಿರಂತರವಾಗಿ ನಡೆಯಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಶ್ರೀ ಒಡಿಯೂರು ಗ್ರಾಮೋತ್ಸವ 2019 ಅಂಗವಾಗಿ ಹಮ್ಮಿಕೊಂಡ ಹೊರಾಂಗಣ ಆಟೋಟಗಳನ್ನು ಉದ್ಘಾಟಿಸಿ ಆಶೀರ್ವಚನಗೈದರು. ಈ ಸಂದರ್ಭ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ-ಶ್ರೀ ಒಡಿಯೂರು ಗ್ರಾಮೋತ್ಸವ 2019ರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ವೇದಿಕೆಯಲ್ಲಿ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಲೋಕನಾಥ ಜಿ. ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಲ| ಎಂ.ಜೆ.ಎಫ್.| ಎ. ಸುರೇಶ್ ರೈ, ನಿರ್ದೇಶಕರಾದ ಶ್ರೀ ಪಿ. ಲಿಂಗಪ್ಪ ಗೌಡ ಪನೆಯಡ್ಕ, ಶ್ರೀ ವೇಣುಗೋಪಾಲ ಮಾರ್ಲ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಶ್ರೀ ಕಿರಣ್ ಉರ್ವ, ಉಡುಪಿ ವಲಯ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ ಕಬ್ಯಾಡಿ, ಶ್ರೀ ಶಶಿಧರ ಶೆಟ್ಟಿ ಜಮ್ಮದಮನೆ, ಶ್ರೀ ಯಶವಂತ ವಿಟ್ಲ, ಒಡಿಯೂರು ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಶ್ರೀ ಪದ್ಮನಾಭ ಒಡಿಯೂರು, ಮಂಗಳೂರು ಪೋರಾರ್ ಇಂಟರ್‍ನ್ಯಾಷನಲ್ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಚಂದ್ರಹಾಸ ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಉಡುಪಿಯ ಕಾರ್ಯದರ್ಶಿ ಶ್ರೀಮತಿ ಅಮಿತಾ ಗಿರೀಶ್, ಕ್ರೀಡಾ ಸಮಿತಿಯ ಸಂಚಾಲಕ ಶ್ರೀ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಸೇರಾಜೆ ಗಣಪತಿ ಭಟ್ ಸ್ವಾಗತಿಸಿ, ಮುಖ್ಯ ಶಿಕ್ಷಕ ಶ್ರೀ ಜಯಪ್ರಕಾಶ್ ಶೆಟ್ಟಿ ವಂದಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬಂಟ್ವಾಳ ತಾಲೂಕು ವಿಸ್ತರಣಾಧಿಕಾರಿ ಶ್ರೀ ಸದಾಶಿವ ಅಳಿಕೆ ನಿರೂಪಿಸಿದರು.

ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಟೊಂಕ ಬಾಲಕಿಯರಿಗೆ, ಟೊಂಕ, ರಸ್ತೆ ಓಟ ಪುರುಷರಿಗೆ: ವಾಲಿಬಾಲ್, ಹಗ್ಗಜಗ್ಗಾಟ, ಬಾಲಕರಿಗೆ: ವಾಲಿಬಾಲ್, ರಸ್ತೆ ಓಟ, ಕಬಡ್ಡಿ ಪಂದ್ಯಾಟ ನಡೆಯಿತು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top