+91 8255-266211
info@shreeodiyoor.org

ಸಾಮೂಹಿಕ ಹುಟ್ಟು ಹಬ್ಬ-ಮಾತೃಪೂಜನ

ನಾವು ಹುಟ್ಟುಹಬ್ಬವನ್ನು ದೀಪವನ್ನು ಉರಿಸುವ ಮೂಲಕ ಮಾಡಬೇಕೇ ಹೊರತು ಆರಿಸಿ ಅಲ್ಲ. ಆ ದೀಪ ಮಕ್ಕಳ ಬದುಕಿಗೆ ಬೆಳಕಾಗಬೇಕೆಂಬುದು ನಮ್ಮೆಲ್ಲರ ಆಶಯ. ಬದುಕು ಶಿಕ್ಷಣಕ್ಕೆ ಒತ್ತುಕೊಡಬೇಕು. ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕು. ಮಕ್ಕಳಲ್ಲಿ ಪ್ರಶ್ನೆ ಹುಟ್ಟುವುದು ಸ್ವಾಭಾವಿಕ. ಆದರೆ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವುದು ನಮ್ಮ ಕರ್ತವ್ಯ. ಆ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠವು ಆಯೋಜಿಸಿದ್ದ ಸಾಮೂಹಿಕ ಹುಟ್ಟುಹಬ್ಬ-ಮಾತೃಪೂಜನ ಕಾರ್ಯಕ್ರಮದಲ್ಲಿ ಸಂದೇಶ ನೀಡಿದರು.

ದಿವ್ಯ ಉಪಸ್ಥಿತರಿದ್ದ ಸಾಧ್ವಿ ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಿ ಮಾತೃ ಎನ್ನುವ ಶಬ್ದಕ್ಕೆ ವ್ಯಾಪಕವಾದ ಅರ್ಥವಿದೆ. ಎಲ್ಲದರಲ್ಲೂ ಮಾತೃತ್ವವನ್ನು ಕಾಣುವ ಸಂಸ್ಕೃತಿ ನಮ್ಮದು. ನಮ್ಮ ದೇಶವನ್ನೇ ಭಾರತಮಾತೆ ಎಂಬುದಾಗಿಯೇ ನಾವು ಸಂಬೋದಿಸುತ್ತೇವೆ. ಮಾತೃಪೂಜನ ಮಾಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಡೆಯುತ್ತಿದೆ ಎಂದರು.

ವೇ|ಮೂ| ಸುಬ್ರಾಯ ಉಪಾಧ್ಯಾಯ ಕಂಬಳಿಮೂಲೆ ಇವರು ಪೂಜಾ ವಿಧಿವಿಧಾನಗಳನ್ನು ತಿಳಿಸಿದರು. ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಶಾಲಾ ಸಂಚಾಲಕರಾದ ಗಣಪತಿ ಭಟ್ ಸೇರಾಜೆ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಾದ ಕು| ಸ್ಮಿತಾ ಸ್ವಾಗತಿಸಿ, ಕು| ಪಲ್ಲವಿ ವಂದಿಸಿ, ಕು| ಅನನ್ಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ-ಶಿಕ್ಷಕಿಯರು ಸಹಕರಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top