+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ವಿಜ್ಞಾನ ಮಾದರಿಗಳ ಪ್ರದರ್ಶನ

ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಅಂಗವಾಗಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಫೆಬ್ರವರಿ 14 ಮತ್ತು 15ರಂದು ವಿಜ್ಞಾನ ಮಾದರಿಗಳ ಪ್ರದರ್ಶನ ಜನಮನವನ್ನು ಆಕರ್ಷಿಸಿದೆ. ಪ್ರದರ್ಶನವನ್ನು ಉದ್ಘಾಟಿಸಿದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು “ವಿಜ್ಞಾನದ ಆವಿಷ್ಕಾರಗಳೊಂದಿಗೆ ಅಧ್ಯಾತ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವುದರಿಂದ ಭವಿಷ್ಯದಲ್ಲಿ ಸತ್ಪ್ರಜೆಗಳನ್ನು ನಿರ್ಮಾಣ ಮಾಡಿ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ” ಎಂದು ಶುಭಹಾರೈಸಿದರು.

ಸಾಧ್ವಿ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿದ್ದ ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಡಾ. ಧರಣೀದೇವಿ ಮಾಲಗತ್ತಿಯವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಸಿಸಿದರು. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬೈ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಪೇಟೆಮನೆ ಪ್ರಕಾಶ್ ಕೆ. ಶೆಟ್ಟಿ, ಪುಣೆ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ನಗ್ರಿಗುತ್ತು ರೋಹಿತ್ ಡಿ. ಶೆಟ್ಟಿ, ಮುಂಬೈನ ಉದ್ಯಮಿಗಳಾದ ಶ್ರೀ ವಾಮಯ್ಯ ಬಿ. ಶೆಟ್ಟಿ, ಶ್ರೀ ಮೋಹನ್ ಹೆಗ್ಡೆ ಥಾನೆ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಮುಂಬೈ ಘಟಕದ ಅಧ್ಯಕ್ಷೆ ಶ್ರೀಮತಿ ರೇವತಿ ವಿ. ಶೆಟ್ಟಿ, ಶಾಲಾ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಮುಖ್ಯೋಪಾಧ್ಯಾಯರಾದ ಶ್ರೀ ಜಯಪ್ರಕಾಶ್ ಶೆಟ್ಟಿ ಎ. ಇವರು ಉಪಸ್ಥಿತರಿದ್ದರು.

ಪ್ರದರ್ಶನವನ್ನು ಸಮೀಪದ ಶಾಲಾ ವಿದ್ಯಾರ್ಥಿಗಳು ಹಾಗೂ ಊರ-ಪರವೂರ ಆಸಕ್ತರು ನೋಡಿ ವಿಸ್ಮಯ ವ್ಯಕ್ತಪಡಿಸಿದರು. ವಿಜ್ಞಾನ ಪ್ರಚಾರಕರಾದ ನಿವೃತ್ತ ಪ್ರೊಫೆಸರ್ ಡಿ.ಆರ್.ಬಳೂರಗಿ ಅವರ ಪೂರ್ಣ ಮಾರ್ಗದರ್ಶನದಲ್ಲಿ ವಿದ್ಯಾಪೀಠದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ವಿಜ್ಞಾನ ಪ್ರದರ್ಶನವನ್ನು ಸುಂದರವಾಗಿ ಜೋಡಿಸಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top