+91 8255-266211
info@shreeodiyoor.org

ಯಶಸ್ಸಿನ ಗುಟ್ಟು ಪರಿಶ್ರಮದಲ್ಲಿ ಅಡಗಿದೆ

“ಕೌಶಲ್ಯ ಎಂಬುದು ಬದುಕಿನ ಮುಖ್ಯ ಭಾಗ. ಯಶಸ್ಸಿನ ಗುಟ್ಟು ಪರಿಶ್ರಮದಿಂದ ಅಡಗಿದೆ. ನಮ್ಮ ಬದುಕಿನಲ್ಲಿ ನಾವೇ ಶಿಲ್ಪಿಗಳಾಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮಲ್ಲಿರುವ ಕೌಶಲ್ಯವನ್ನು ಉಪಯೋಗಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು. ಇದರ ಪರಿಪೂರ್ಣತೆಗೆ ಇಂತಹ ತರಬೇತಿಯ ಅವಶ್ಯಕತೆ ಇದೆ “ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವೃತ್ತಿ ಶಿಕ್ಷಣ ಸಂಸ್ಥೆ, ಕನ್ಯಾನ ಇದರ ಅಲ್ಪಾವಧಿ ಕೋರ್ಸ್‌ಗಳ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಯಾದ ಶ್ರೀ ಹರೀಶ್ ಕೋಟ್ಯಾನ್‌ರವರು ಮಾತನಾಡುತ್ತಾ “ಸರಕಾರವು ಕೌಶಲ್ಯ ಅಭಿವೃದ್ಧಿ ಯೋಜನೆಗೆ ಒತ್ತು ನೀಡುವುದರೊಂದಿಗೆ “ಸ್ಕಿಲ್ ಇಂಡಿಯಾ”ದಂತಹ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ” ಎಂದರು.

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕರಾದ ಶ್ರೀ ತಾರಾನಾಥ ಕೊಟ್ಟಾರಿ, ಒಡಿಯೂರ‍್ದ ತುಳು ಕೂಟದ ಅಧ್ಯಕ್ಷರಾದ ಶ್ರೀ ಎಚ್.ಕೆ. ಪುರುಷೋತ್ತಮ್, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಮಂಗಳೂರು ಘಟಕದ ಅಧ್ಯಕ್ಷ ಶ್ರೀ ಜಯಂತ್ ಕೋಟ್ಯಾನ್, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಕನ್ಯಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಶ್ರೀ ಕೆ.ಪಿ. ರಘುರಾಮ ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಶ್ರೀ ಎ. ಜಯಪ್ರಕಾಶ್ ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಶ್ರೀ ಬಿ.ಕೆ. ಚಂದ್ರಶೇಖರ ಹಾಗೂ ಸಲಹೆಗಾರರಾದ ಶ್ರೀ ವಾಸುದೇವ ಆರ್. ಕೊಟ್ಟಾರಿ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಕರುಣಾಕರ್ ಎನ್.ಬಿ. ಸ್ವಾಗತಿಸಿದರು. ಶ್ರೀ ಪ್ರವೀಣ್‌ಕುಮಾರ್ ವಂದಿಸಿದರು, ಶ್ರೀಮತಿ ಶ್ವೇತಾರವರು ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top