+91 8255-266211
info@shreeodiyoor.org

ಶಿಬಿರಗಳು ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ – ಒಡಿಯೂರು ಶ್ರೀ

“ಪ್ರಕೃತಿಯನ್ನು ನೋಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಪ್ರಕೃತಿ ಮತ್ತು ಮನುಷ್ಯನಿಗೆ ಅವಿನಾಭಾವ ಸಂಬಂಧವಿದೆ. ಶಿಬಿರಗಳು ಪ್ರತಿಭೆಗಳನ್ನು ಅರಳಿಸುವುದರೊಂದಿಗೆ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ಆತ್ಮವಿಶ್ವಾಸ ಮಿತವಾಗಿರಬೇಕು. ಅತಿಯಾದಲ್ಲಿ ನಮ್ಮನ್ನು ಕುಗ್ಗಿಸುತ್ತದೆ. ಶಿಕ್ಷಣದ ಬೇರುಗಳು ಕಹಿಯಾಗಿದ್ದರೂ ಭವಿಷ್ಯದಲ್ಲಿ ಅದರ ಫಲ ಸಿಹಿಯಾಗಿರುತ್ತದೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ ಮತ್ತು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಆಯೋಜಿಸಿದ್ದ ಎರಡು ದಿನಗಳ ವಸಂತ ಶಿಬಿರವನ್ನು ಉದ್ಘಾಟಿಸಿ ಆಶೀರ್ವಚನಗೈದರು.

ವೇದಿಕೆಯಲ್ಲಿ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಶ್ರೀ ಯಶವಂತ್ ವಿಟ್ಲ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಲೋಹಿತ್ ಭಂಡಾರಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ನಿರ್ದೇಶಕ ಶ್ರೀ ಕಿರಣ್ ಉಡುಪಿ, ಶಾಲಾ ಸಂಚಾಲಕರಾದ ಶ್ರೀ ಗಣಪತಿ ಭಟ್ ಸೇರಾಜೆ, ಮುಖ್ಯೋಪಾಧ್ಯಾಯರಾದ ಶ್ರೀ ಜಯಪ್ರಕಾಶ್ ಶೆಟ್ಟಿ, ಶಿಬಿರಾರ್ಥಿಗಳಾ ಕನ್ಯಾನ ಬಾಲವಿಕಾಸ ಕೇಂದ್ರದ ರಿತೇಶ್, ಪೆರುವಾಯಿ ಬಾಲವಿಕಾಸ ಕೇಂದ್ರದ ದೀಕ್ಷಿತಾ ಉಪಸ್ಥಿತರಿದ್ದರು.

ಸುಮಾರು 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು, ಬಾಲವಿಕಾಸ ಕೇಂದ್ರದ ಮಾತಾಜಿಯವರು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಿಕ್ಷಕ ವೃಂದದವರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕಿ ಶ್ರೀಮತಿ ವೇದಾವತಿ ಕಾರ್ಯಕ್ರಮ ನಿರೂಪಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್. ರೈ ವಂದಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top