+91 8255-266211
info@shreeodiyoor.org

ಸಂಸ್ಥಾನದ ವತಿಯಿಂದ ಕೊಡಗು ನೆರೆ ಪರಿಹಾರ ನಿಧಿಗೆ ನೆರವು

 

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ಕೊಡಗು ನೆರೆ ಪರಿಹಾರ ನಿಧಿಗೆ ರೂಪಾಯಿ 1 ಲಕ್ಷದ ಚೆಕ್ಕನ್ನು ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು ಇವರು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಇವರಿಗೆ ಹಸ್ತಾಂತರಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರ್ದ ತುಳುಕೂಟದ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಂಗಳೂರು ವಲಯದ ಅಧ್ಯಕ್ಷ ಜಯಂತ್ ಜೆ. ಕೋಟ್ಯಾನ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಬಿ.ಕೆ. ಚಂದ್ರಶೇಖರ್ ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top