+91 8255-266211
info@shreeodiyoor.org

ಸಾತ್ವಿಕ ಆಹಾರ ಸೇವನೆಯಿಂದ ಆರೋಗ್ಯ ರಕ್ಷಣೆ – ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ


 
“ಋತುಮಾನಕ್ಕೆ ಸರಿಯಾದ ಹಿತ-ಮಿತವಾದ ಆಹಾರ ಸೇವನೆಯಿಂದ ಆರೋಗ್ಯವನ್ನು ರಕ್ಷಿಸಬಹುದು” ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಆಶೀರ್ವಚನಗೈದರು.

ಅವರು ಒಡಿಯೂರು ಶ್ರೀ ಸಂಸ್ಥಾನದ ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಒಡಿಯೂರು ಶ್ರೀ ವಿಕಾಸವಾಹಿನ ಸ್ವ-ಸಹಾಯ ಸಂಘಗಳ ವಿಟ್ಲ ಮತ್ತು ವಿಟ್ಲಪಡ್ನೂರು ಘಟ ಸಮಿತಿ, ವಿಟ್ಲ ಯಕ್ಷಭಾರತ ಸೇವಾ ಪ್ರತಿಷ್ಠಾನ, ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಮಾಜಕಾರ್ಯ ವಿಭಾಗ, ವಿಠಲ ವಿದ್ಯಾ ಸಂಘ, ವಿಟ್ಲ ಇದರ ಸಂಯುಕ್ತ ಆಶ್ರಯಲ್ಲಿ ದ.ಕ. ಜಿಲ್ಲಾ ಆಯುಷ್ ಇಲಾಖೆ ಮತ್ತು ಮೂಡಬಿದರೆ ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರ ಸಹಭಾಗಿತ್ವದಲ್ಲಿ ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಜರಗಿದ ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ವಿಟ್ಲ ಮತ್ತು ವಿಟ್ಲಪಡ್ನೂರು ಗ್ರಾಮಗಳ ಸ್ವ-ಸಹಾಯ ಸಂಘಗಳ ಅರ್ಹ ಫಲಾನುಭವಿಗಳಿಗೆ ಸುಮಾರು 4.72ಲಕ್ಷ ರೂಪಾಯಿ ಲಾಭಾಂಶವನ್ನು ಪೂಜ್ಯ ಸಾಧ್ವಿಯವರು ವಿತರಿಸಿದರು.

ವಿಟ್ಲ ಅರಮನೆಯ ಶ್ರೀ ಕೃಷ್ಣಯ್ಯ ಕೆ., ಆಯುರ್ವೇದ ವೈದ್ಯಾಧಿಕಾರಿ ಡಾ. ಶೋಭಾರಾಣಿ, ದತ್ತಪ್ರಕಾಶದ ಶ್ರೀ ಯಶವಂತ ವಿಟ್ಲ, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿಯ ನಿರ್ದೇಶಕ ಶ್ರೀ ಗಣೇಶ್ ರೈ ಗಮಿ, ಯಕ್ಷಭಾರತ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಡಿ. ಸಂಜೀವ ಪೂಜಾರಿ, ಉಪನ್ಯಾಸಕ ಶ್ರೀ ಜಾನ್ ಡಿ’ಸೋಜ, ಡಾ. ಕೃಷ್ಣಪ್ರಸಾದ್, ಯೋಜನೆಯ ಬಂಟ್ವಾಳ ವಿಸ್ತರಣಾಧಿಕಾರಿ ಶ್ರೀ ಸದಾಶಿವ ಅಳಿಕೆ, ಘಟಸಮಿತಿಯ ಪದಾಧಿಕಾರಿಗಳಾದ ಶ್ರೀ ಸುನಿಲ್ ವಿಟ್ಲ, ಚೈತ್ರಾ ಉಪಸ್ಥಿತರಿದ್ದರು.

ಕೈರುನ್ನಿಸಾ ಸ್ವಾಗತಿಸಿ, ಶ್ರೀಮತಿ ಕಾವ್ಯಲಕ್ಷ್ಮೀ ಫಲಾನುಭವಿಗಳ ಪಟ್ಟಿ ವಾಚಿಸಿದರು. ಪದ್ಮನಾಭ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top