+91 8255-266211
info@shreeodiyoor.org

ಜೀವ-ದೇವನ ಸಂಬಂಧದ ಬೆಸುಗೆ ಯೋಗ-ಒಡಿಯೂರು ಶ್ರೀ

ದೇಹವು ಒಂದು ಮನೆ, ಜೀವ-ದೇವನಾಗಲು ಯೋಗ ಬೇಕು. ಇದು ನಾಲ್ಕು ದಿಕ್ಕುಗಳಿಗೂ ಅನ್ವಯವಾಗುತ್ತದೆ. ಮೂಡಣ ದಿಕ್ಕು ರಾಗದ ಸಂಕೇತವಾದರೆ, ಪಶ್ಮಿಮ ರೋಗ, ಉತ್ತರ ಯೋಗ, ದಕ್ಷಿಣವು ಬೋಗದ ಸಂಕೇತ. ಯೋಗದಿಂದ ಸರ್ವರೋಗ ನಿವಾರಣೆಯಾಗುತ್ತದೆ. ಜೀವ ದೇವನ ಸಂಬಂಧದ ಬೆಸುಗೆಯೇ ಯೋಗ. ಇದು ಇನ್ನಷ್ಟು ಬಲಗೊಳ್ಳಲು ಅಷ್ಟಾಂಗಯೋಗವು ಪೂರಕ. ಧರ್ಮಪ್ರೀತಿಯೊಂದಿಗೆ ರಾಷ್ಟ್ರಪ್ರೇಮವು ಎಲ್ಲರಲ್ಲೂ ಬೆಳೆಯಲಿ ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜರಗಿದ ಉಚಿತ ಯೋಗ ಶಿಬಿರವನ್ನು ಉದ್ಘಾಟಿಸಿ ಸಂದೇಶ ನೀಡಿದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠವು ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಒಂದು ವಾರದ ಉಚಿತ ಯೋಗ ಶಿಬಿರವನ್ನು ಪೂಜ್ಯ ಶ್ರೀಗಳವರು ದೀಪೋಜ್ವಲನದೊಂದಿಗೆ ಉದ್ಘಾಟಿಸಿದರು.
ಈ ಸುಸಂದರ್ಭ ಯೋಗ ಶಿಕ್ಷಕರಾದ ಶ್ರೀ ಆನಂದ ಶೆಟ್ಟಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಶ್ರೀ ಟಿ. ತಾರಾನಾಥ ಕೊಟ್ಟಾರಿ, ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ನೂತನ ಅಧ್ಯಕ್ಷ ಶ್ರೀ ಎಚ್.ಕೆ. ಪುರುಷೋತ್ತಮ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಘಟಕದ ಅಧ್ಯಕ್ಷ ಶ್ರೀ ಎ. ಅಶೋಕ ಕುಮಾರ್, ಮಂಗಳೂರು ವಲಯದ ಅಧ್ಯಕ್ಷ ಶ್ರೀ ಜಯಂತ್ ಜೆ. ಕೋಟ್ಯಾನ್, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀ ರಘುನಾಥ ಶೆಟ್ಟಿ ಪಟ್ಲಗುತ್ತು, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಶ್ರೀ ಪಿ. ಲಿಂಗಪ್ಪ ಗೌಡ ಉಪಸ್ಥಿತರಿದ್ದರು.
ಶ್ರೀಮತಿ ರೇಣುಕಾ ಎಸ್.ರೈಯವರ ಪ್ರಾರ್ಥನಾಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶ್ರೀ ಸದಾಶಿವ ಅಳಿಕೆ ನಿರೂಪಸಿ, ಧನ್ಯವಾದವಿತ್ತರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top