+91 8255-266211
info@shreeodiyoor.org

ಮಕ್ಕಳನ್ನು ಸಂಸ್ಕೃತಿಯ ಹರಿಕಾರರನ್ನಾಗಿಸಬೇಕು


 
“ಅರಿಷಡ್ವೈರಿಗಳನ್ನು ಶೂನ್ಯಗೊಳಿಸಿದಾಗ ಭಗವಂತನ ಕೈಸೇರುವ ಕೊಳಲು ನಾವಾಗುತ್ತೇವೆ; ಪರಿಶುದ್ಧವಾದ ಬೆಣ್ಣೆಯೂ ನಾವಾಗಬಹುದು. ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ ಮತ್ತು ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳಿವಿನ ಹರಿಕಾರರಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು.” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜೈ ಗುರುದೇವ ಕಲಾಕೇಂದ್ರ, ಒಡಿಯೂರು ಆಯೋಜಿಸಿದ್ದ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಆಶೀರ್ವಚನಗೈದರು.

ಸಾಧ್ವಿ ಶ್ರೀ ಮಾತಾನಂದಮಯಿಯವರು ಉಪಸ್ಥಿತರಿದ್ದರು. ಶ್ರೀ ಯಶವಂತ್ ವಿಟ್ಲ ಹಾಗೂ ಶ್ರೀ ಕಿರಣ್ ಆರ್ಟಿಸ್ಟ್ ತೀರ್ಪುಗಾರರಾಗಿ ಸಹಕರಿಸಿದರು. ಕಲಾಕೇಂದ್ರದ ಅಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಒಡಿಯೂರು ಸ್ವಾಗತಿಸಿ, ಕಾರ್ಯದರ್ಶಿ ಶ್ರೀ ಸುಖೇಶ್ ಭಂಡಾರಿ ವಂದಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬಂಟ್ವಾಳ ಮೇಲ್ವಿಚಾರಕ ಶ್ರೀ ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top