+91 8255-266211
info@shreeodiyoor.org

ನೆಲ್ಯಾಡಿ: ಒಡಿಯೂರು ಶ್ರೀ ಷಷ್ಠ್ಯಬ್ದ ಪ್ರಯುಕ್ತ ನೇತ್ರ ಚಿಕಿತ್ಸಾ ಶಿಬಿರ, ಕನ್ನಡಕ ವಿತರಣೆ

ನೆಲ್ಯಾಡಿ, ಮಾ. 21: ಶ್ರೀ ಒಡಿಯೂರು ಗ್ರಾಮ ವಿಕಾಸ ಯೋಜನೆ, ಶ್ರೀ ಕ್ಷೇ. ಧ.ಗ್ರಾ.ಯೋಜನೆ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ತಾಲೂಕು ಆರೋಗ್ಯ ಕೇಂದ್ರ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಕಾರ್ಯಕ್ರಮದ ಅಂಗವಾಗಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಪುತ್ತೂರಿನ ಆನಂದಾಶ್ರಮ ಸೇವಾವತಿಯಿಂದ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನೆಲ್ಯಾಡಿ ಸರಕಾರಿ ಹಿ. ಪ್ರಾ. ಶಾಲಾ ಸಭಾಂಗಣದಲ್ಲಿ ನಡೆಯಿತು.

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಶ್ರೀ ಬಾಲಕೃಷ್ಣ ಗೌಡ ಹಾರ್ಪಳ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಷಷ್ಠ್ಯಬ್ದ ಸಂಭ್ರಮ ಕಡಬ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣ ಶೆಟ್ಟಿ, ಜಿ.ಪಂ.ಸದಸ್ಯ ಶ್ರೀ ಸರ್ವೋತ್ತಮ ಗೌಡ, ತಾ.ಪ. ಸದಸ್ಯೆ ಶ್ರೀಮತಿ ಉಷಾ ಅಂಚನ್, ನ್ಯಾಯವಾದಿ ಉಸ್ಮಾನ್ ನೆಲ್ಯಾಡಿ ಭಾಗವಹಿಸಿದ್ದರು.ಒಡಿಯೂರು ಗ್ರಾಮ ವಿಕಾಸ ಯೋಜನೆಯ ನಿರ್ದೇಶಕ ಶ್ರೀ ಕಿರಣ್ ಉರ್ವ ಅಧ್ಯಕ್ಷತೆ ವಹಿಸಿದ್ದರು.ನೆಲ್ಯಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀ ಗಂಗಾಧರ ಶೆಟ್ಟಿ ಹೊಸಮನೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ವಿಕಾಸ ಯೋಜನೆಯ ನೆಲ್ಯಾಡಿ ಘಟಸಮಿತಿಯ ಅಧ್ಯಕ್ಷ ಶ್ರೀ ಗಂಗಾಧರ ಶೆಟ್ಟಿ ಕೋಲ್ಯೋಟು ವಂದಿಸಿದರು. ಶಿಬಿರದಲ್ಲಿ 221 ಕಣ್ಣು ರೋಗಿಗಳನ್ನು ಪರೀಕ್ಷಿಸಲಾಯಿತು. 16 ರೋಗಿಗಳಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. 209 ಜನರಿಗೆ ಕನ್ನಡಕ ವಿತರಿಸಲಾಯಿತು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top