+91 8255-266211
info@shreeodiyoor.org

ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಗೆ ‘ಉತ್ತಮ ಸೌಹಾರ್ದ ಸಹಕಾರಿ’ ಪ್ರಶಸ್ತಿ


 
ಕರ್ನಾಟಕ ರಾಜ್ಯದಲ್ಲಿರುವ 4500ಕ್ಕಿಂತಲೂ ಹೆಚ್ಚಿನ ಸೌಹಾರ್ದ ಸಹಕಾರಿಯಲ್ಲಿ ಅತ್ಯುತ್ತಮ ಮಾದರಿ ಸಹಕಾರಿಯಾಗಿ ಕಾರ್ಯನಿರ್ವಹಿಸಿದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ‘ಉತ್ತಮ ಸೌಹಾರ್ದ ಸಹಕಾರಿ’ ಪ್ರಶಸ್ತಿಯನ್ನು ಘೋಷಿಸಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಸೆ. 18ರಂದು ಜರಗಿದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ 18ನೇ ಸಾಮಾನ್ಯ ಸಭೆಯ ವಿಶೇಷ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಶ್ರೀ ಕೃಷ್ಣ ರೆಡ್ಡಿಯವರು ಪ್ರದಾನ ಮಾಡಿದರು. ಒಡಿಯೂರು ಸಹಕಾರಿಯ ಅಧ್ಯಕ್ಷ ಲ| ಎ. ಸುರೇಶ್ ರೈ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಉಗ್ಗಪ್ಪ ಶೆಟ್ಟಿ ಕೊಂಬಿಲ ಇವರು ಪ್ರಶಸ್ತಿ ಸ್ವೀಕರಿಸಿದರು. ಒಡಿಯೂರು ಸಹಕಾರಿಯ ನಿರ್ದೇಶಕರಾದ ಶ್ರೀ ಲಿಂಗಪ್ಪ ಗೌಡ ಪನೆಯಡ್ಕ, ಶ್ರೀ ದೇವಪ್ಪ ನೋಂಡ ಪುತ್ತೂರು, ಶ್ರೀ ತಾರಾನಾಥ ಶೆಟ್ಟಿ ಒಡಿಯೂರು, ಶ್ರೀ ಗಣಪತಿ ಭಟ್ ಸೇರಾಜೆ ಜತೆಗಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top