+91 8255-266211
info@shreeodiyoor.org

ಕಡಬ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಪ್ರಯುಕ್ತ ರಕ್ತದಾನ ಶಿಬಿರ

ಕಡಬ, ಫೆ.28: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಕಾರ್ಯಕ್ರಮದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕಡಬ ವಲಯ, ಕಡಬ ತಾಲೂಕು ಒಡಿಯೂರು ಶ್ರೀ ಷಷ್ಠ್ಯಬ್ದ ಆಚರಣಾ ಸಮಿತಿ, ಒಡಿಯೂರು ಶ್ರೀ ಸೇವಾ ಬಳಗ ಕಡಬ, ಕಡಬ ಸಮುದಾಯ ಆರೋಗ್ಯ ಕೇಂದ್ರ, ಮಂಗಳೂರಿನ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಜರಗಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಡಬ ತಾ.ಪಂ. ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಕನ್ಯಾಮಂಗಲ ಅವರು ಉದ್ಘಾಟಿಸಿದರು.
ಒಡಿಯೂರು ಶ್ರೀ ಷಷ್ಠ್ಯಬ್ದ ಆಚರಣಾ ಕೇಂದ್ರ ಸಮಿತಿಯ ಕಾರ್ಯದರ್ಶಿ ಶ್ರೀ ಯಶವಂತ ವಿಟ್ಲ ಅವರು ಮಾತನಾಡಿ, ಒಡಿಯೂರು ಕ್ಷೇತ್ರದಿಂದ ನಡೆಸಲ್ಪಡುತ್ತಿರುವ ಸಮಾಜಮುಖಿ ಸೇವಾ ಕಾರ್ಯಗಳು, ಷಷ್ಠ್ಯಬ್ದ ಆಚರಣಾ ಸಮಿತಿಯ ನೇತೃತ್ವದಲ್ಲಿ ವಿವಿಧೆಡೆ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರಿನ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಶ್ರೀ ಆ್ಯಂಟನಿ ಅವರು ಮಾತನಾಡಿ ರಕ್ತದಾನದ ಮಹತ್ವ ಹಾಗೂ ಅದರಿಂದ ನಮ್ಮ ಆರೋಗ್ಯದ ಮೇಲೆ ಆಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.
ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ| ಅಭಿಷೇಕ್, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವಿಸ್ತರಣಾ ಅಧಿಕಾರಿ ಶ್ರೀ ಯಶೋಧರ ಸಾಲಿಯಾನ್, ಕಡಬ ಸಮುದಾಯ ಆಸ್ಪತ್ರೆಯ ಮಕ್ಕಳತಜ್ಞೆ ಡಾ| ಅನುಷಾ, ಕಡಬ ಒಡಿಯೂರು ಶ್ರೀ ಸೇವಾ ಬಳಗದ ಕಾರ್ಯದರ್ಶಿ ಶ್ರೀ ಸೀತಾರಾಮ ಗೌಡ ಎ. ಉಪಸ್ಥಿತರಿದ್ದರು.
ಅಕಾಲಿಕವಾಗಿ ನಿಧನ ಹೊಂದಿದ ಒಡಿಯೂರುಶ್ರೀ ಗ್ರಾಮ ವಿಕಾಸ ಯೋಜನೆಯ ಸ್ವ-ಸಹಾಯ ಸಂಘದ ಸದಸ್ಯ ಫಲಾನುಭವಿಗೆ ಮಂಜೂರಾದ ವಿಮಾ ಪರಿಹಾರ ಚೆಕ್‍ನ್ನು ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.
ಕಡಬ ತಾಲೂಕು ಒಡಿಯೂರು ಶ್ರೀ ಷಷ್ಠ್ಯಬ್ದ ಆಚರಣ ಸಮಿತಿಯ ಅಧ್ಯಕ್ಷ ಶ್ರೀ ಕೃಷ್ಣ ಶೆಟ್ಟಿ ಕಡಬ ಸ್ವಾಗತಿಸಿದರು, ಒಡಿಯೂರು ಗ್ರಾಮ ವಿಕಾಸ ಯೋಜನೆಯ ನಿರ್ದೇಶಕ ಶ್ರೀ ಕಿರಣ್ ಉರ್ವ ಪ್ರಸ್ತಾವನೆಗೈದರು. ಪತ್ರಕರ್ತ ಶ್ರೀ ನಾಗರಾಜ್ ಎನ್.ಕೆ. ನಿರೂಪಿಸಿದರು, ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶ್ರೀ ಸೋಮಪ್ಪ ನಾೈಕ್ ಕಡಬ ವಂದಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top