+91 8255-266211
info@shreeodiyoor.org

ರಾಮಮಂದಿರ ಶಿಲಾನ್ಯಾಸದ ಸವಿನೆನಪಿಗೆ ಒಡಿಯೂರು ಶ್ರೀಗಳವರಿಂದ ಕದಂಬವನಕ್ಕೆ ಚಾಲನೆ

 

ಕೋಟಿ ಕೋಟಿ ಭಾರತೀಯರ ಕನಸಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಸಂಪನ್ನಗೊಳ್ಳುತ್ತಿರುವ ಐತಿಹಾಸಿಕ ಸುಮುಹೂರ್ತದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು “ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ, ಈ ಐತಿಹಾಸಿಕ ದಿನದ ಸವಿನೆನಪಿಗಾಗಿ ಒಡಿಯೂರು ಶ್ರೀ ಸಂಸ್ಥಾನದ ಪರಿಸರದಲ್ಲಿ ‘ಕದಂಬವನ’ವನ್ನು ನಿರ್ಮಿಸಲು ಚಾಲನೆ ನೀಡಿ, ಪ್ರಕೃತಿ ಸಂರಕ್ಷಣೆಯ ಸಂಕಲ್ಪ ಮಾಡಿ” ಅನುಗ್ರಹ ಸಂದೇಶವಿತ್ತರು.

ಸಾಧ್ವಿ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ.ಶೆಟ್ಟಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀ ರಘುನಾಥ ಶೆಟ್ಟಿ ಪಟ್ಲಗುತ್ತು, ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ನಿರ್ವಹಣಾ ಸಮಿತಿಯ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀ ಎ. ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ರೇಣುಕಾ ಎಸ್.ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರುಗಳಾದ ಶ್ರೀ ಪಿ. ಲಿಂಗಪ್ಪ ಗೌಡ, ಶ್ರೀ ತಾರಾನಾಥ ಶೆಟ್ಟಿ ಒಡಿಯೂರು, ಹಿರಿಯ ಪತ್ರಕರ್ತ ಶ್ರೀ ಯಶವಂತ ವಿಟ್ಲ, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಶ್ರೀ ಪದ್ಮನಾಭ ಒಡಿಯೂರು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶಿಕ್ಷಕ-ಶಿಕ್ಷಕಿಯರು ಹಾಗೂ ಶ್ರೀ ಸಂಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top