+91 8255-266211
info@shreeodiyoor.org

“ಪ್ರಾಮಾಣಿಕ ಪರಿಶ್ರಮಕ್ಕೆ ಯಶಸ್ಸು ನಿಶ್ಚಿತ”

“ಪ್ರಾಮಾಣಿಕ ಪರಿಶ್ರಮಕ್ಕೆ ಯಶಸ್ಸು ನಿಶ್ಚಿತ”

ಒಡಿಯೂರು ಶ್ರೀ ಗುರುದೇವ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ೨೦೨೩-೨೪ರ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭದಲ್ಲಿ
ಪೂಜ್ಯ ಶ್ರೀಗಳವರಿಂದ ಆಶೀರ್ವಚನ
“ಪರಿಶ್ರಮ ಮತ್ತು ಪ್ರಾಮಾಣಿಕತೆ ಸೇರಿಕೊಂಡಾಗ ಯಶಸ್ಸು ಕಟ್ಟಿಟ್ಟ ಬುತ್ತಿ.ಯಾವತ್ತೂ ಆತ್ಮಸ್ತೈರ್ಯ ಕಳೆದುಕೊಳ್ಳಬಾರದು. ಸೋಲು ಗೆಲುವು ಸಾಮಾನ್ಯ. ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ. ಸಂಸ್ಕಾರಯುತ ಜೀವನವನ್ನು ಅಳವಡಿಸಿಕೊಳ್ಳಬೇಕು. ಏನೇ ಆದರೂ ನಮ್ಮತನವನ್ನು ಬಿಡಬಾರದು. ನಾವು ಮಾನವೀಯ ಮೌಲ್ಯದ ಕೊಂಡಿಗಳಾಗಬೇಕು” ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕನ್ಯಾನ ಇದರ ೨೦೨೩-೨೪ ಶೈಕ್ಷಣಿಕ ವರ್ಷದ ಆರಂಭ ಮತ್ತು ತರಬೇತಿ ಪಡೆದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಆಶೀರ್ವಚನಗೈದರು.
ಅತಿಥಿಗಳಾಗಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಕೇಪು, ಕಲ್ಲಂಗಳ ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ದಿನೇಶ್ ಇವರು ಮಾತನಾಡಿ, “ಇದೊಂದು ಭಾವನಾತ್ಮಕ ಕಾರ್ಯಕ್ರಮ, ಕಳೆದು ಹೋದ ಸಮಯ ಪಡೆಯಲು ಸಾಧ್ಯವಿಲ್ಲ. ಸಮಯದ ಸದುಪಯೋಗಪಡಿಸಿಕೊಂಡಾಗ ಮಾತ್ರಾ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಕೇಳುಗರಾಗಿರಬೇಕು” ಎಂದು ತಿಳಿಸಿದರು.ಇನ್ನೋರ್ವ ಮುಖ್ಯ ಅತಿಥಿ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇದರ ಪ್ರಭಾರ ಪ್ರಾಂಶುಪಾಲರಾದ ಶ್ರೀ ಹರೀಶ್ ಇವರು ಮಾತನಾಡಿ “ಸಂಸ್ಥೆಯಲ್ಲಿ ಸಿಗುವಂತಹ ಉತ್ತಮ ಸವಲತ್ತುಗಳನ್ನು ಉಪಯೋಗಿಸಿ ಭವಿಷ್ಯ ಉಜ್ವಲಗೊಳಿಸಿ” ಎಂದು ಮಕ್ಕಳಿಗೆ ಶುಭ ಹಾರೈಸಿದರು.ಒಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಶ್ರೀ ಲಿಂಗಪ್ಪಗೌಡ ಪನೆಯಡ್ಕ, ಕನ್ಯಾನ ಗ್ರಾಮ ಪಂಚಾಯತ್‌ನ ಸದಸ್ಯ ಶ್ರೀ ಕೆ.ಪಿ. ರಘುರಾಮ ಶೆಟ್ಟಿ, ಹಿರಿಯ ಪತ್ರಕರ್ತರು, ಒಡಿಯರ‍್ದ ತುಳುಕೂಟದ ಅಧ್ಯಕ್ಷ ಶ್ರೀ ಯಶವಂತ ವಿಟ್ಲ ಉಪಸ್ಥಿತರಿದ್ದರು.ಸಂಸ್ಥೆಯ ಪ್ರಾಚಾರ್ಯ ಶ್ರೀ ಪವೀಣ್‌ಕುಮಾರ್ ಎನ್. ಪ್ರಸ್ತಾವನೆಗೈದು, ಸ್ವಾಗತಿಸಿದರು, ಕಿರಿಯ ತರಬೇತಿ ಅಧಿಕಾರಿ ಶ್ರೀ ಶಿವಪ್ರಸಾದ್ ವಂದಿಸಿದರು. ಶ್ರೀ ಸಂಪ್ರೀತ್‌ರವರು ಕಾರ್ಯಕ್ರಮ ನಿರೂಪಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top