ಒಡಿಯೂರು ಶ್ರೀ ಸಂಸ್ಥಾನದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿಗಳ ಕಿರು ನಾಟಕ ಸ್ಪರ್ಧೆ
ಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಶ್ರೀ ಒಡಿಯೂರು ಗ್ರಾಮೋತ್ಸವ 2025ರ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯಮಾರ್ಗದರ್ಶನದಲ್ಲಿ ಆ.6 ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿಗಳ ಕಿರು ನಾಟಕ ಸ್ಪರ್ಧೆ. ಹಲವಾರು ಕಾಲೇಜುಗಳ ತಂಡ ಭಾಗವಹಿಸುತ್ತಿದ್ದು, ಬೆಳಿಗ್ಗೆ ಗಂಟೆ 9.30 ಕ್ಕೆ ಸ್ಪರ್ಧೆಯು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಸ್ಪರ್ಧೆಯು ಸಂಜೆಯ ತನಕ ನಡೆಯಲಿದೆ.