“ನಮ್ಮ ಬದುಕಿನಲ್ಲಿ ನಾವು ವಿಜಯಿಗಳಾಗೋಣ”

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಹೊರಾಂಗಣ ಕ್ರೀಡಾಕೂಟ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ
ಜೂ.೨೨: “ಸಂಭ್ರಮದಲ್ಲಿ ಎರಡು ರೀತಿ ಇದೆ. ಹೊರ ಸಂಭ್ರಮ ಇಂದ್ರಿಯಗಳಿಗೆ ಸಂಬಂದಿಸಿದ್ದಾದರೆ. ಒಳ ಸಂಭ್ರಮ ಆಧ್ಯಾತ್ಮಿಕಕ್ಕೆ ಸಂಬಂಧಿಸಿದ್ದಾಗಿದೆ. ದೇಶದೆಲ್ಲೆಡೆ ವಿವಿಧ ರೀತಿಯ ಸ್ಪರ್ಧೆಗಳು ನಡೆಯುತ್ತಿವೆ. ಸ್ಪರ್ಧೆ ಯಾವಾಗಲೂ ಆರೋಗ್ಯಪೂರ್ಣವಾಗಿರಬೇಕು. ಸ್ಪರ್ಧಾತ್ಮಕ ಬದುಕು ಎಲ್ಲರಲ್ಲಿದೆ. ಧರ್ಮದ ನೆರಳು ನಮಗೆ ಬೇಕು. ಸಾಮರಸ್ಯ ಎಲ್ಲೆಡೆ ಮೂಡಲಿ. ತ್ಯಾಗ ಮನೋಭಾವದೊಂದಿಗೆ ನಮ್ಮ ಬದುಕಿನಲ್ಲಿ ನಾವು ವಿಜಯಿಗಳಾಗೋಣ” ಎಂದು ಪೂಜ್ಯ ಸ್ವಾಮೀಜಿಯವರು ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಮೈದಾನದಲ್ಲಿ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾಧ್ವೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಸ್ವಾಗತ ಸಮಿತಿ ಅಧ್ಯಕ್ಷ ಸಹಕಾರ ರತ್ನ ಲ| ಎ. ಸುರೇಶ್ ರೈ, ಉಪಾಧ್ಯಕ್ಷ ಶ್ರೀ ಗಣಪತಿ ಭಟ್ ಸೇರಾಜೆ, ಕ್ರೀಡಾಕೂಟದ ಸಂಚಾಲಕ ಶ್ರೀ ಶಶಿಧರ ಶೆಟ್ಟಿ ಜಮ್ಮದಮನೆ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಮುಖ್ಯಶಿಕ್ಷಕಿ ಶ್ರೀಮತಿ ರೇಣುಕಾ ಎಸ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ವೇಣುಗೋಪಾಲ್ ಮಾರ್ಲ, ಶ್ರೀ ಗುರುದೇವ ಐ.ಟಿ.ಐ.ನ ಪ್ರಾಂಶುಪಾಲ ಶ್ರೀ ಪ್ರವೀಣ್‌ಕುಮಾರ್ ಎನ್., ಮಂಗಳೂರು ಪದುವಾ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಚಂದ್ರಹಾಸ ಶೆಟ್ಟಿ ಅಳಿಕೆ, ಶ್ರೀ ರವೀಂದ್ರ ಶೆಟ್ಟಿ ಚೆಂಡುಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕು| ಶ್ರದ್ಧಾ ಜೆ. ಶೆಟ್ಟಿ ಪ್ರಾರ್ಥಿಸಿದರು. ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಲಿಂಗಪ್ಪ ಗೌಡ ಪನೆಯಡ್ಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ಮಾತೇಶ್ ಭಂಡಾರಿ ವಂದಿಸಿದರು. ಬಳಿಕ ಮಹಿಳೆಯರಿಗೆ – ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳು ನಡೆಯಿತು.