ಅಕ್ಟೋಬರ ೦೩ರಂದು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದರಜತ ಸಂಭ್ರಮದ ಪ್ರಯುಕ್ತ ಪ್ರೌಢಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ರಜತ ಸಂಭ್ರಮದ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ದಿನಾಂಕ ೧೧.೧೦.೨೦೨೬ ರವಿವಾರ ಪೂಜ್ಯ ಶ್ರೀಗಳವರ ದಿವ್ಯ ಮಾರ್ಗದರ್ಶನದಲ್ಲಿ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವು ಜರಗಲಿರುವುದು. ತತ್ಸಂಬAಧ ತಾ.೦೩-೧೦-೨೦೨೬ನೇ ಶನಿವಾರ ಬೆಳಿಗ್ಗೆ ಗಂಟೆ ೧೦.೩೦ರಿಂದ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಭಾವಗೀತೆ, ಕನ್ನಡ ಭಾಷಣ, ಪ್ರಬಂಧ ರಚನೆ, ಕವಿತಾ ರಚನೆ, ಕಥಾ ರಚನೆ, ವರ್ಣಚಿತ್ರ ರಚನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಭಾಗವಹಿಸುವ ಸ್ಪರ್ಧಾಳುಗಳು ಸೆಪ್ಟಂಬರ ೩೦ರ ಮೊದಲು ತಮ್ಮ ಹೆಸರನ್ನು ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಶಾಲಾ ಕಛೇರಿಯಲ್ಲಿ ನೋಂದಾಯಿಸಿಕೊಳ್ಳುವುದು. ಭಾವಗೀತೆಯನ್ನುಳಿದು ಇತರ ಸ್ಪರ್ಧೆಗಳ ವಿಷಯಗಳನ್ನು ಸ್ಪರ್ಧೆಯ ದಿನ ೧ ಗಂಟೆ ಮುಂಚಿತವಾಗಿ ನೀಡಲಾಗುವುದು. ಕಥೆ ಹಾಗೂ ಕವಿತೆಗಳು (ಸ್ಥಳದಲ್ಲಿಯೇ) ಸ್ವರಚಿತವಾಗಿರಬೇಕು. ಸ್ಪರ್ಧೆಗೆ ಬೇಕಾದ ಸಾಮಾಗ್ರಿಗಳನ್ನು ಸ್ಪರ್ಧಾಳುಗಳೇ ತರತಕ್ಕದ್ದು.
ಸ್ಪರ್ಧಾಳುಗಳು ಸ್ಪರ್ಧೆಗೆ ಬರುವಾಗ ತಮ್ಮ ಶಾಲೆಯ ಮುಖ್ಯಶಿಕ್ಷಕರಿಂದ ಅಧಿಕೃತ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುವುದು. ಸ್ಪರ್ಧಾಳುಗಳಿಗೆ ಪ್ರಯಾಣ ಭತ್ತೆಯನ್ನು ನೀಡಲಾಗುವುದು. ಪ್ರಥಮ ಬಹುಮಾನ ರೂ. ೫೦೦೦/- ಮತ್ತು ದ್ವಿತೀಯ ಬಹುಮಾನ ರೂ. ೩೦೦೦/- ಸ್ಪರ್ಧಾ ವಿಜೇತರಿಗೆ ಮಕ್ಕಳ ಸಾಹಿತ್ಯ ಸಮ್ಮೇಳನದಂದು ಗಣ್ಯರ ಸಮ್ಮುಖದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರು ಬಹುಮಾನವನ್ನು ಪ್ರಶಸ್ತಿ ಪತ್ರದೊಂದಿಗೆ ನೀಡಿ ಗೌರವಿಸಲಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ ೯೯೦೧೭೯೨೧೨೪/೭೩೪೯೪೩೨೩೫೭ಯನ್ನು ಸಂಪರ್ಕಿಸುವುದು.