75ನೇ ಸ್ವಾತಂತ್ರ್ಯೋತ್ಸವ-ಅಮೃತ ಮಹೋತ್ಸವ ಆಚರಣೆ
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯೋತ್ಸವ-ಅಮೃತ ಮಹೋತ್ಸವ ಆಚರಣೆಯಲ್ಲಿ ಒಡಿಯೂರು ಶ್ರೀ
“ವಿಶ್ವಗುರು ಎಂದು ಮಾನ್ಯತೆ ಪಡೆದ ಭಾರತ ಶ್ರೇಯಸ್ಸಿನ ಮಾರ್ಗದ ಶ್ರೇಷ್ಠತೆಯ ಬಗ್ಗೆ ವಿಶ್ವಕ್ಕೆ ಕಲಿಸಿಕೊಟ್ಟಿದೆ. ದೇಶಕ್ಕೊಂದು ಸಂವಿಧಾನ ಇದ್ದಂತೆ ಬದುಕಿಗೂ ಸಂವಿಧಾನ ಬೇಕು. ಅದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಸ್ಮರಿಸುವುದು ಮತ್ತು ಮಕ್ಕಳಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಯುವ ಕಾರ್ಯ ನಡೆಯಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯೋತ್ಸವ-ಅಮೃತ ಮಹೋತ್ಸವ ಆಚರಣೆಯ ಪ್ರಯುಕ್ತ ಧ್ವಜಾರೋಹಣಗೈದು ಸಂದೇಶ ನೀಡಿದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವದಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹಮಾನಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ದೇಶಭಕ್ತಿಗೀತೆ, ಭಾಷಣ, ನೃತ್ಯ ಮೊದಲಾದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಜಲಿಯನ್ ವಾಲಾಬಾಗ್ ದುರಂತವನ್ನು ತೋರಿಸುವ ಅಣುಕು ಪ್ರದರ್ಶನ ಹಾಗೂ ಸ್ವಾತಂತ್ರ್ಯದ ಅಮೃತೋತ್ಸವ ಗೀತೆ ಆಕರ್ಷಕವಾಗಿ ಮೂಡಿಬಂದವು.
ಸಮಾರಂಭದಲ್ಲಿ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಶ್ರೀ ಪಿ. ಲಿಂಗಪ್ಪ ಗೌಡ, ನಿರ್ದೇಶಕರುಗಳಾದ ಶ್ರೀ ಅಶೋಕ್‍ಕುಮಾರ್ ಬಿ.ಸಿ.ರೋಡು, ಶ್ರೀ ಜಯಪ್ರಕಾಶ್ ರೈ ನೂಜಿಬೈಲು, ಹಿರಿಯ ಪತ್ರಕರ್ತ ಶ್ರೀ ಮಲಾರು ಜಯರಾಮ ರೈ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್.ರೈ ವಂದನಾರ್ಪಣೆಗೈದರು. ಸಂಸ್ಕøತ ಶಿಕ್ಷಕಿ ಶ್ರೀಮತಿ ನಿವೇದಿತಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿ ಗಂಗಾ ಇವರು ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಸಂಸ್ಥಾನದ ಪ್ರವೇಶದ್ವಾರ ಕಮ್ಮಾಜೆಯಿಂದ ಒಡಿಯೂರು ಶ್ರೀ ಸಂಸ್ಥಾನದ ತನಕ ಬ್ಯಾಂಡುಮೇಳ, ಜೈಕಾರದೊಂದಿಗೆ ನಡೆದ ಶೋಭಾಯಾತ್ರೆಯಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ಅತ್ಯುತ್ಸಾಹದಿಂದ ಭಾಗವಹಿಸಿದರು.