ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ
ದಿನಾಂಕ 30-09-2022ನೇ ಶುಕ್ರವಾರ ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾಪಂಚಮಿ ಮಹೋತ್ಸವ-ಶ್ರೀ ಚಂಡಿಕಾ ಯಾಗ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಬೆಳಗ್ಗೆ ಘಂಟೆ 9.00ರಿಂದ ಶ್ರೀ ಗಣಪತಿ ಹವನ, ನಾಗತಂಬಿಲ, ಶ್ರೀ ಚಂಡಿಕಾ ಯಾಗ ಆರಂಭ, ಘಂಟೆ 10.30ರಿಂದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯೋಪಸ್ಥಿತಿಯಲ್ಲಿ ಧರ್ಮಸಭೆ-ಶ್ರೀ ಒಡಿಯೂರು ಕಲಾಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ರವೀಂದ್ರ ಎಸ್. ಕಂಬಳಿ, ಎ.ಪಿ.ಎಂ.ಸಿ. ಪುತ್ತೂರು ಇದರ ಮಾಜಿ ಅಧ್ಯಕ್ಷ ಶ್ರೀ ರಾಧಾಕೃಷ್ಣ ರೈ ಬೂಡಿಯಾರು ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಡಾ. ಸಾಹಿತಿ, ಖ್ಯಾತ ಯಕ್ಷಗಾನ ಅರ್ಥದಾರಿ ಕೆ. ರಮಾನಂದ ಬನಾರಿ, ಸಾಹಿತಿ, ಯಕ್ಷಗಾನ ಅರ್ಥದಾರಿ ಶ್ರೀ ಸೇರಾಜೆ ಸೀತಾರಾಮ ಭಟ್, ಯೋಗಗುರು ಶ್ರೀ ಕೆ. ಆನಂದ ಶೆಟ್ಟಿ ಅಳಿಕೆ, ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಯಕ್ಷಗುರು ವರ್ಕಾಡಿ ಶ್ರೀ ರವಿ ಅಲೆವೂರಾಯ, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ, ಕನ್ನಡ ಗ್ರಾಮ, ಕಾಸರಗೋಡು ಇದರ ಅಧ್ಯಕ್ಷ ಶ್ರೀ ಶಿವರಾಮ ಕಾಸರಗೋಡು, ಯಕ್ಷಗಾನ ಭಾಗವತರು ಹಾಗೂ ಯಕ್ಷಗುರು ಶ್ರೀ ಶೇಖರ ಶೆಟ್ಟಿ ಬಾಯಾರು ಇವರುಗಳು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಘಂಟೆ 12.30ರಿಂದ: ಶ್ರೀ ಚಂಡಿಕಾ ಯಾಗದ ಪೂರ್ಣಾಹುತಿ, ಶ್ರೀ ವಜ್ರಮಾತೆಗೆ ಕಲ್ಪೋಕ್ತ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಮಹಾಸಂತರ್ಪಣೆ ಅಪರಾಹ್ಣ ಘಂ.2.30ರಿಂದ ಯಕ್ಷಪ್ರತಿಭೆ (ರಿ.), ಮಂಗಳೂರು ಇವರಿಂದ ‘ಬೇಡರ ಕಣ್ಣಪ್ಪ’ ಯಕ್ಷಗಾನ ಬಯಲಾಟ, ಸಂಜೆ ಘಂ.6.00ರಿಂದ ಸಾಮೂಹಿಕ ಸ್ವಯಂವರ ಪಾರ್ವತೀಪೂಜೆ, ಅಷ್ಟಾವಧಾನ ಸೇವೆ, ರಂಗಪೂಜೆ, ಭದ್ರಕಾಳಿಗೆ ವಿಶೇಷಪೂಜೆ ಜರಗಲಿರುವುದು.