Editor

Editor

ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಮಂಜೇಶ್ವರ ವಲಯ ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

‘ಜನಸೇವೆಯೇ ಭಗವಂತನಿಗೆ ಪ್ರೀತ್ಯರ್ಥ’ ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಮಂಜೇಶ್ವರ ವಲಯ ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಪೂಜ್ಯ ಒಡಿಯೂರು ಶ್ರೀ ಮಂಜೇಶ್ವರ, ಫೆ. 7: “ಮನುಷ್ಯನ ಬದುಕು ನಿಂತ ನೀರಾಗದೆ ಸದಾ ಹರಿಯುತ್ತಿರುವ ನದಿಯಂತಿರಬೇಕು. ಜ್ಞಾನದ ಕೀಲಿಕೈ ಅನುಭವವಾಗಿದೆ. ಸಮಸ್ಯೆಗಳ ಅನುಭವಗಳಿಂದ ಜ್ಞಾನದ ವೃದ್ಧಿ ಸಾಧಿಸಬೇಕು. ಮನುಷ್ಯ ತನ್ನ ಹುಟ್ಟು ಮತ್ತು ಸಾವಿನ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶತರುದ್ರಾಭಿಷೇಕ

ಶ್ರೀ ಸಂಸ್ಥಾನದಲ್ಲಿ ತಾ.11-03-2021ನೇ ಶುಕ್ರವಾರ ರಾತ್ರಿ ಮಹಾಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು.

ಮನೆ-ಮನೆಗಳಲ್ಲಿ ತುಳು ಭಾಷೆ ಬೆಳೆಯಲಿ – 21ನೇ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಒಡಿಯೂರು ಶ್ರೀ ಆಶೀರ್ವಚನ

“ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ರಾಜ್ಯ, ಕೇಂದ್ರ ಸರಕಾರಗಳಿಗೆ ಮನವಿ ಮಾಡಲಾಗಿದೆ. ತುಳುವರಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆಯಿದೆ. ಅದನ್ನು ನಿವಾರಿಸಿ ಸಮ್ಮಿಳಿತ ಪ್ರಯತ್ನವಾಗಬೇಕು. ಮನೆ-ಮನೆಗಳಲ್ಲಿ ತುಳು ಭಾಷೆಯಲ್ಲೇ ಮಾತುಕತೆಯಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜರಗಿದ 21ನೇ ತುಳು ಸಾಹಿತ್ಯ…

21ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಒಡಿಯೂರು ಶ್ರೀ ಆಶೀರ್ವಚನ

ಫೆ.21: “ಸಾಹಿತ್ಯ ಶ್ರೇಷ್ಠವಾದುದು. ವೇದ, ಉಪನಿಷತ್ತು, ಪುರಾಣ, ಸಾಹಿತ್ಯ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ. ಹಲವು ಭಾಷೆಗಳ ಅಡಕತ್ತರಿಯಲ್ಲಿ ಸಿಲುಕಿದ್ದರಿಂದ ತುಳು ಭಾಷೆ ಕಡೆಗಣಿಸಲ್ಪಟ್ಟಿದೆ. ತುಳು ಭಾಷಿಗರು ಪರಿಶುದ್ಧವಾಗಿ ತುಳುವಲ್ಲಿ ಸಂವಹನ ಮಾಡಬೇಕು. ತುಳು ಭಾಷಾ ಪ್ರೇಮ ಆತ್ಮಜ್ಯೋತಿಯಾಗಿ ಅರಳಬೇಕು. ತುಳು ಭಾಷೆಯ ಏಳ್ಗೆಗಾಗಿ ಸಂಘಟಿತ ಪ್ರಯತ್ನವಾಗಬೇಕು. ತುಳುವರ ಸೇವಾ ಮನೋಭಾವ ಸಮಷ್ಠಿಯಲ್ಲಿ ಕಾಣಬೇಕು” ಎಂದು ಪರಮಪೂಜ್ಯ ಶ್ರೀ…

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕಾಸರಗೋಡು ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ಜ. 29: ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ 2021 – ಜ್ಞಾನವಾಹಿನಿ ಕಾರ್ಯಕ್ರಮದ ಕಾಸರಗೋಡು ವಲಯ ಸಮಿತಿ ಮತ್ತು ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಸಭಾಮಂಟಪದಲ್ಲಿ ಜರಗಿತು.ಕಾರ್ಯಕ್ರಮಕ್ಕೆ ಪೂಜ್ಯ ಸ್ವಾಮೀಜಿಗಳವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು…

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಮಂಗಳೂರು ನಗರ ಸಮಿತಿ ಪಂಚ ಕಾರ್ಯಕ್ರಮಗಳಿಗೆ ಚಾಲನೆ

ಮಂಗಳೂರು, ಜ. 16: “ಪರೋಪಕಾರದ ಗುಣವನ್ನು ರೂಢಿಸಿಕೊಂಡು ಸೇವಾಕಾರ್ಐದಲ್ಲಿ ತೊಡಗಿಸಿಕೊಂಡಾಗ ಬದುಕು ಸಾರ್ಥಕ್ಯವನ್ನು ಪಡೆಯುತ್ತದೆ. ತ್ಯಾಗ ಸೇವಯಲ್ಲಿ ಬದುಕಿನ ಶಾಶ್ವತ ಸುಖ ಅಡಗಿದೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ನಗರದ ಪುರಭವನದಲ್ಲಿ ಜರಗಿದ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ, ಮಂಗಳೂರು ನಗರ ಸಮಿತಿಯ ಪಂಚ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಆಶೀರ್ವಚನಗೈದರು. ಸಾಧ್ವಿ ಶ್ರೀ…

ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸುಳ್ಯ ಸಮಿತಿಯ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ಸುಳ್ಯ, ಜ.26: “ನಮ್ಮ ಬದುಕಿಗೂ ಒಂದು ಸಂವಿಧಾನ ಬೇಕು. ಅದುವೇ ಧರ್ಮ. ಮಾನವೀಯತೆಯ ಬದುಕು ಅಗತ್ಯ. ಬದುಕೇ ಒಂದು ಸಂದೇಶವಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಷಷ್ಠ್ಯಬ್ದ ಆಚರಣೆಯಂಗವಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲ್ಲಿ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸುಳ್ಯ ಸಮಿತಿಯ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಆಶೀರ್ವಚನಗೈದರು. ಸಾಧ್ವಿ…

ಒಡಿಯೂರು ಶ್ರೀ ಸಂಸ್ಥಾನದ ನೂತನ ‘ರಾಜಾಂಗಣ’ ಎ.23ಕ್ಕೆ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಜ್ಞಾನ ವಾಹಿನಿಯ ಕೇಂದ್ರ ಸಮಿತಿಯ ಪದಾಧಿಕಾರಿಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಕೇಂದ್ರ ಸಮಿತಿಯ ಗೌರವಾಧ್ಯಕ್ಷರಾದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಮತ್ತು ಕೇಂದ್ರ…

ಗಣರಾಜ್ಯೋತ್ಸವ ಆಚರಣೆ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಣುಕಾ ಎಸ್ ರೈ, ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಉದಯಕುಮಾರ್ ರೈ ಕಾರ್ಯಕ್ರಮ ನಿರ್ವಹಿಸಿದರು.