“ಪ್ರಜ್ಞಾವಂತ ಪ್ರಜೆಗಳಿಂದಲೇ ಆದರ್ಶ ರಾಷ್ಟ್ರ” –ಒಡಿಯೂರು ಶ್ರೀ
“ದಾಸ್ಯದಿಂದ ಮುಕ್ತವಾಗಿರುವುದೇ ಸ್ವಾತಂತ್ರ್ಯ. ಸ್ವಾತಂತ್ರ್ಯ ಸ್ವೇಚ್ಛೆಯಾಗಬಾರದು. ಸುವ್ಯವಸ್ಥಿತವಾದ ಆಡಳಿತ ನೋಡಬೇಕಾದರೆ ಪ್ರಜ್ಞಾವಂತ ಪ್ರಜೆಗಳಿರಬೇಕು. ಆಗಲೇ ಆದರ್ಶ ರಾಷ್ಟ್ರವಾಗುವುದು. ಧರ್ಮದಂಡದ ಮೂಲಕ ಆಡಳಿತ ನಡೆಸಿದಾಗ ಅಹಂಕಾರವಿರುವುದಿಲ್ಲ. ರಾಜ ದಂಡ, ಧರ್ಮದಂಡ ಎರಡೂ ಅವಶ್ಯಕ. ಧರ್ಮವನ್ನು ಮರೆತ ರಾಜನಿಗೂ ಉಳಿಗಾಲವಿಲ್ಲ. ದೇಶದ ಬಲಿಷ್ಠತೆಗೆ, ಸಂರಕ್ಷಣೆಗೆ ನಾವೆಲ್ಲರೂ ಬದ್ಧರಾಗಿರಬೇಕು. ಭಾರತದ ದೇಶದ ಅಡಿಪಾಯವೇ ಅಧ್ಯಾತ್ಮಿಕತೆ. ಇದರಿಂದಾಗಿ ಭಾರತಕ್ಕೆ ಯಾವುದೇ ಅಪಾಯವಿಲ್ಲ.…