‘ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ’ – ಒಡಿಯೂರು ಶ್ರೀ
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ-ಮಹಾಭಾರತ ಸಂಸ್ಕøತಿಯ ಕಣ್ಣುಗಳಿದ್ದಂತೆ. ‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು.…