“ನಾಗಾರಾಧನೆ ಪ್ರಕೃತಿಯ ಆರಾಧನೆ” ನಾಗರ ಪಂಚಮಿ ಮಹೋತ್ಸವದಲ್ಲಿ ಒಡಿಯೂರು ಶ್ರೀ ದಿವ್ಯ ಸಂದೇಶ
“ನಾಗಾರಾಧನೆಯಲ್ಲಿ ಪ್ರಕೃತಿಯ ಆರಾಧನೆಯ ತತ್ತ್ವವಿದೆ. ಸಂಪತ್ತುಗಳ ಅಧಿಪತಿ ನಾಗರಾಜ. ನಾಗಾರಾಧನೆಯ ಹಿಂದೆ ಮೂಲ ಸಂಸ್ಕøತಿಯ ಅಂಶವಿದೆ. ಆಸ್ತಿಕ ಭಾವಕ್ಕೆ ಹೆಚ್ಚು ಗೌರವವಿದೆ. ಪುರಾಣಗಳ ಪ್ರಕಾರ 16000 ಸರ್ಪಸಂಕುಲಗಳಿವೆ. ನಾಗಾರಾಧನೆಯ ಹೆಸರಿನಲ್ಲಿ ಪ್ರಕೃತಿಯ ಉಳಿವಿದೆ. ಪ್ರಕೃತಿಯ ಆರಾಧನೆಯಿಂದ ಆರೋಗ್ಯದ ಹಿತವಿದೆ. ಪ್ರಕೃತಿಯಲ್ಲಿ ಪರಮಾತ್ಮನ ಅಸ್ತಿತ್ವವನ್ನು ಕಾಣಬಹುದು. ಸಹೋದರತ್ವವನ್ನು ಪ್ರತಿನಿಧಿಸುವ ನಾಗರಪಂಚಮಿ ಹಬ್ಬ ನಾಡಿಗೆ ವಿಶೇಷ ಹಬ್ಬವಾಗಿದೆ” ಎಂದು…