Category Spiritual

ಬೆಳಕಿನೆಡೆಗೆ…

ದೀಪದ ಆರಾಧನೆ ದೀಪೋತ್ಸವ. ಬದುಕೇ ದೀಪೋತ್ಸವ ಆಗಬೇಕು. ಅಂತರ್‍ಜ್ಯೋತಿ ಬೆಳಗಿದರೆ ನಮ್ಮಲ್ಲಿ ಹುದುಗಿರುವ ಅಸುರ ಶಕ್ತಿಯೆಂಬ ಅಂಧÀಕಾರ ನೀಗಿ ಜ್ಞಾನದ ಬೆಳಕು ಮೂಡಿ ಬರಲು ಸಾಧ್ಯ. ಬೆಳಕಿಲ್ಲದೆ ಕತ್ತಲಿಲ್ಲ, ಕತ್ತಲಿಲ್ಲದೆ ಬೆಳಕಿಲ್ಲ. ಬೆಳಕಿನ ದೀಪ ಬೆಳಗಿಸಲು ಕತ್ತಲು ಬೇಕು. ಅಂಧಕಾರವನ್ನು ಓಡಿಸಲು ಬೆಳಕು ಬೇಕು. ಆ ಬೆಳಕು ಎಂಬ ಶಕ್ತಿ ಪ್ರತಿಯೋರ್ವನ ದೇಹದ ಒಳಗೂ ಇದೆ…

ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ – ಒಡಿಯೂರು ಶ್ರೀ

“ಸಮುದ್ರ ಮಥನ ಸಮಯದಲ್ಲಿ ಅವತರಿಸಿದ ಶ್ರೀ ಧನ್ವಂತರೀ ದೇವರ ಆರಾಧನೆಯಿಂದ ಸರ್ವರೋಗ ನಿವಾರಣೆಯಾಗುತ್ತದೆ. ಆರೋಗ್ಯಪೂರ್ಣ ಬದುಕಿಗೆ ಭಗವದಾರಾಧನೆಯ ಅಗತ್ಯವಿದೆ. ನೈತಿಕ ಸ್ವಾಸ್ಥ್ಯ, ಸಮಾಜದ ಸ್ವಾಸ್ಥ್ಯಕ್ಕೆ ಆರಾಧನೆಗಳು ಪೂರಕ. ಶ್ರೀ ಧನ್ವಂತರೀ ದೇವರ ಆರಾಧನೆಯ ಮೂಲಕ ಕೊರೋನಾ ಮಹಾಮಾರಿಯಿಂದ ಜಗತ್ತೇ ಮುಕ್ತಿಹೊಂದಲಿ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಅಕ್ಟೋಬರ 20ರಂದು ಮಂಗಳವಾರ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ – ಶ್ರೀ ಚಂಡಿಕಾ ಯಾಗವು ನಡೆಯಲಿರುವುದು. ಬೆಳಿಗ್ಗೆ ಮಂಗಳಾರತಿಯ ಬಳಿಕ ಶ್ರೀ ನಾಗದೇವರಿಗೆ ನಾಗತಂಬಿಲ. ಗಂಟೆ 9.30ಕ್ಕೆ ಶ್ರೀ ಚಂಡಿಕಾ ಯಾಗವು ಆರಂಭಗೊಂಡು…

ಒಡಿಯೂರು ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ವೇ| ಮೂ| ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ನಡೆಯಿತು. ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. 

ರಾಮಮಂದಿರ ಶಿಲಾನ್ಯಾಸದ ಸವಿನೆನಪಿಗೆ ಒಡಿಯೂರು ಶ್ರೀಗಳವರಿಂದ ಕದಂಬವನಕ್ಕೆ ಚಾಲನೆ

ಕೋಟಿ ಕೋಟಿ ಭಾರತೀಯರ ಕನಸಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಸಂಪನ್ನಗೊಳ್ಳುತ್ತಿರುವ ಐತಿಹಾಸಿಕ ಸುಮುಹೂರ್ತದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು “ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ, ಈ ಐತಿಹಾಸಿಕ ದಿನದ ಸವಿನೆನಪಿಗಾಗಿ ಒಡಿಯೂರು ಶ್ರೀ ಸಂಸ್ಥಾನದ ಪರಿಸರದಲ್ಲಿ ‘ಕದಂಬವನ’ವನ್ನು…

ಧಾರ್ಮಿಕ ಆಚರಣೆಗಳು ರಾಷ್ಟ್ರೀಯತೆಯನ್ನು ಪ್ರತಿಬಿಂಬಿಸುತ್ತದೆ – ಒಡಿಯೂರು ಶ್ರೀ

“ಸಂಪತ್ತು ಎಂದರೆ ಹಣ ಮಾತ್ರವಲ್ಲ. ಇದರಲ್ಲಿ ಅಷ್ಟ ಐಶ್ವರ್ಯಗಳು ಸೇರಿವೆ. ಸಂಪತ್ತಿನ ಅಧಿದೇವತೆ ಲಕ್ಷ್ಮೀ. ಸಂಪತ್ತನ್ನು ಹೇಗೆ ಬಳಸಬೇಕೆಂಬುದನ್ನು ಅಧ್ಯಾತ್ಮಿಕತೆ ತಿಳಿಸುತ್ತದೆ. ಧರ್ಮಪ್ರಜ್ಞೆಯ ಸಂಪತ್ತಿನೊಂದಿಗೆ ಜ್ಞಾನವೂ ನಮ್ಮಲ್ಲಿ ಇರಬೇಕು. ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾ ಶಕ್ತಿಗಳು ಸೇರಿಕೊಂಡಾಗ ಜೀವನಮೌಲ್ಯ ವೃದ್ಧಿಸುತ್ತದೆ. ಶ್ರಾವಣ ಮಾಸದ ಮೊದಲ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆಯನ್ನು ಆಚರಿಸುವುದು ವಾಡಿಕೆ. ಇಂತಹ ಆಚರಣೆಗಳು ರಾಷ್ಟ್ರೀಯ…

ಒಡಿಯೂರು ಶ್ರೀ ಸಂಸ್ಥಾನದ ಪ್ರಕಟಣೆ

ಒಡಿಯೂರು ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವವನ್ನು (ಜುಲೈ 17, 2020) ಗುರುಬಂಧುಗಳು ಮನೆ-ಮನಗಳಲ್ಲಿ ಗುರುವಂದನೆಯನ್ನು ನಡೆಸುವ ಮೂಲಕ ಪೂಜ್ಯ ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯು ಪ್ರಕಟಣೆ ನೀಡಿದೆ. ಗುರುಬಂಧುಗಳು ತಮ್ಮ ಆರೋಗ್ಯವನ್ನು ಕಾಯ್ದುಕೊಂಡು ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪೂಜ್ಯ ಶ್ರೀಗಳವರು ಕರೆ ನೀಡಿದ್ದಾರೆ. ಮಹಾಮಾರಿಯ ಬಗ್ಗೆ ಭಯ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜೂ.22ರಿಂದ ದೇವರ ದರ್ಶನ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ತಾ.22-06-2020ರಿಂದ ದೇವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ ಘಂಟೆ 10ರಿಂದ 12ರ ತನಕ ಅಂತರವನ್ನು ಕಾಯ್ದುಕೊಂಡು ಪೂಜ್ಯ ಶ್ರೀಗಳವರ ಭೇಟಿಗೆ ಅವಕಾಶವಿದೆ. ಪ್ರವೇಶಕ್ಕೆ ಮಾಸ್ಕ್ ಧಾರಣೆ, ಸಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಸ್ವಚ್ಛತೆ ಕಡ್ಡಾಯ. ಹೆಚ್ಚಿನ ಮಾಹಿತಿಗೆ 08255-266211/298282/9448177811 ಸಂಪರ್ಕಿಸಬಹುದು.

“ಭಾರತೀಯ ಸಂಸ್ಕೃತಿಯಲ್ಲಿ ಆರೋಗ್ಯಪೂರ್ಣ ಬದುಕು” – ಒಡಿಯೂರು ಶ್ರೀ

“ನಿಮಗೆಲ್ಲ ಹನುಮಜ್ಜಯಂತಿಯ ಶುಭಾಶಯಗಳು.  ಭಾರತದ ಪ್ರಸಿದ್ಧ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಭಾರತೀಯ ಸಂಸ್ಕೃತಿಯ ನಯನಗಳು. ಇವು ಅರ್ಥಪೂರ್ಣವಾಗಿ, ಆರೋಗ್ಯಪೂರ್ಣವಾಗಿ ಬದುಕನ್ನು ರೂಪಿಸುವ ಪಠ್ಯಗಳಿದ್ದಂತೆ. ಭಾವೀ ಬ್ರಹ್ಮನೆನಿಸಿದ ಚಿರಂಜೀವಿ ಹನುಮಂತನ ವಿಶೇಷತೆಗಳನ್ನು ರಾಮಾಯಣ ಮಹಾಕಾವ್ಯದ ಸುಂದರಕಾಂಡದಲ್ಲಿ ನೋಡಬಹುದು. ಇಷ್ಟಾರ್ಥ ಸಿದ್ಧಿಗಾಗಿ ಸುಂದರಕಾಂಡ ಪಾರಾಯಣ ಮಾಡುವಂತದ್ದು ಪ್ರತೀತಿ. ‘ಸುಂದರ’ ಅಂದರೆ ಚೆನ್ನಾಗಿರುವವ ಎಂದರ್ಥವಾದರೂ ಅಂತರಂಗ-ಬಹಿರಂಗವನ್ನು ಸುಂದರವಾಗಿರಿಸಿಕೊಂಡವ. ಅಧ್ಯಾತ್ಮದ…

‘ಶ್ರೀ ಹನುಮೋತ್ಸವ’ ತತ್ಸಂಬಂಧ ಮುಂದೂಡಲಾಗಿದೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪ್ರತಿವರ್ಷದಂತೆ ನಿಗದಿಪಡಿಸಿದ್ದ ‘ಶ್ರೀ ಹನುಮೋತ್ಸವ’ ತತ್ಸಂಬಂಧ ಹಮ್ಮಿಕೊಂಡ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ಭಾರತ ಸರಕಾರವು ಹೊರಡಿಸಿರುವ ಅಧಿಸೂಚನೆಯಂತೆ ಮುಂದೂಡಲಾಗಿದೆ.