
Shree Dattanjaneya Kshetra, Dakshina Ganagapura

Shree Dattanjaneya Kshetra, Dakshina Ganagapura
Category Spiritual
Sri Hanumothsavam
ಮಹಾಶಿವರಾತ್ರಿಯ ಪ್ರಯುಕ್ತ ಒಡಿಯೂರು ಸಂಸ್ಥಾನದಲ್ಲಿ ಶತರುದ್ರಾಭಿಷೇಕ ಜರಗಿತು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶತರುದ್ರಾಭಿಷೇಕ ಜರಗಿತು.
ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶತರುದ್ರಾಭಿಷೇಕ
ಶ್ರೀ ಸಂಸ್ಥಾನದಲ್ಲಿ ತಾ. 21-02-2020ನೇ ಶುಕ್ರವಾರ ರಾತ್ರಿ ಮಹಾ ಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು. ತಾವೆಲ್ಲರೂ ಪಾಲ್ಗೊಂಡು ಆರಾಧ್ಯ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ. ಸೇವೆ ಮಾಡಲಿಚ್ಛಿಸುವವರು ಶ್ರೀ ಸಂಸ್ಥಾನದ ಸೇವಾವಿಭಾಗದಲ್ಲಿ ಹೆಸರು ನೋಂದಾಯಿಸಬಹುದು.
ಒಡಿಯೂರು ಶ್ರೀಗಳ ಸಂತಾಪ
ವಿಶ್ವವಂದ್ಯ, ವಿಶ್ವಸಂತ, ಉಡುಪಿ ಅಷ್ಟಮಠದ ಹಿರಿಯ ಯತಿಶ್ರೇಷ್ಠರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದುದು ಭಾರತೀಯ ಸನಾತನ ಪರಂಪರೆಗೆ ತುಂಬಲಾರದ ನಷ್ಟ. ಲೋಕೋದ್ಧಾರದ ಚುಕ್ಕಾಣಿ ಹಿಡಿದು, ಸಮನ್ವಯತೆಯ ಹರಿಕಾರರಾಗಿ ಆಧ್ಯಾತ್ಮಿಕ ಪರಿವ್ರಾಜಕರಾಗಿದ್ದ ಪೂಜ್ಯ ಶ್ರೀಗಳವರು ಅಗಲಿರುವುದು ತುಂಬಾ ದುಃಖವನ್ನುಂಟು ಮಾಡಿದೆ ಎಂದು ಒಡಿಯೂರು ಶ್ರೀಗಳವರು ಸಂತಾಪ ವ್ಯಕ್ತಪಡಿಸಿದ್ದಾರೆ.
“ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ ಆಚರಣೆಗಳು ಅರ್ಥಪೂರ್ಣ”: ಒಡಿಯೂರು ಶ್ರೀ ಆಶೀರ್ವಚನ
“ಭಗವಂತನ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಅಲೌಕಿಕ ಬದುಕು ಉನ್ನತಿಯನ್ನು ಸಾಧಿಸುತ್ತದೆ. ಲೌಕಿಕ ಬಂಧನದಿಂದ ಬಿಡುಗಡೆಗೊಂಡರೆ ಅದುವೇ ಮೋಕ್ಷ. ಬದುಕು ಸತ್ವಪೂರ್ಣವಾಗಿರಬೇಕು. ಧರ್ಮಯುಕ್ತವಾಗಿರಬೇಕು. ಪ್ರಪಂಚವೇ ನಮಗೆ ಪಾಠಶಾಲೆ. ಶ್ರೀ ಗುರುಚರಿತ್ರೆ ಅಮೃತವನ್ನು ಸವಿಯುವಂತೆ ಮಾಡುತ್ತದೆ. ಗುರುದತ್ತಾತ್ರೇಯರ ತತ್ತ್ವಗಳನ್ನು ನಮ್ಮೊಳಗೆ ಅನುಷ್ಠಾನಿಸಬೇಕು. ಆಗ ಭಗವಂತನ ಪ್ರೀತಿಗೆ ಪಾತ್ರರಾಗಲು ಸಾಧ್ಯ. ಹೃದಯದಲ್ಲಿ ದೃಢತೆ ಇದ್ದಾಗ ಕಾರ್ಯ ಸಾಧನೆಯಾಗುತ್ತದೆ. ಭಗವಂತನ ಕಲ್ಯಾಣಗುಣಗಳನ್ನು ಮೈಗೂಡಿಸಿಕೊಂಡಾಗ…
“ತ್ಯಾಗದಿಂದ ಕೂಡಿದ್ದರೆ ಬದುಕು ಸಾರ್ಥಕ” ಶ್ರೀ ದತ್ತಮಾಲಾಧಾರಣೆಗೈದು ಒಡಿಯೂರು ಶ್ರೀ ಆಶೀರ್ವಚನ
“ಬೋಗದ ಬದುಕು ನಿಜಾರ್ಥದ ಬದುಕಲ್ಲ. ತ್ಯಾಗದಿಂದ ಕೂಡಿದ್ದರೆ ಮಾತ್ರ ಬದುಕು ಸಾರ್ಥಕವೆನಿಸುತ್ತದೆ. ಸಮರಸ ತತ್ತ್ವವೆನಿಸಿದ ಗುರುತತ್ತ್ವ ಪ್ರತಿಯೊಬ್ಬರ ಬದುಕಿನಲ್ಲಿಯೂ ಅನುಷ್ಠಾನವಾಗಬೇಕಿದೆ. ಸಮುದ್ರದ ವಾತಾವರಣ ವ್ಯತ್ಯಯವಾದಾಗ ಸುನಾಮಿಗಳು ಏಳುವಂತೆ ನಮ್ಮ ಶರೀರದಲ್ಲಿ ಕಾಮ, ಕ್ರೋಧಗಳು ಅಧಿಕವಾದಾಗಲೂ ತ್ರಿಕರಣಾದಿಯಾಗಿ ಎಲ್ಲವೂ ಏರುಪೇರಾಗಬಹುದು. ಬದುಕಿನ ಅಥ್ ಅರಿವಾದಾಗ ನಾವು ಉತ್ತಮರಾಗುತ್ತೇವೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು…
“ಕಾನೂನಿನಲ್ಲಿ ಕಠಿಣತೆ ಇಲ್ಲದಿದ್ದರೆ ಅನಾಹುತ ಹೆಚ್ಚಾಗುತ್ತದೆ”- ಒಡಿಯೂರು ಶ್ರೀ
“ರಾಮಾಯಣ, ಮಹಾಭಾರತದಂತಹ ಪುರಾಣಗಳು ಯಕ್ಷಗಾನ ಕಲೆಯ ಮೂಲಕ ಹಳ್ಳಿಗಳ ಜನರನ್ನು ಮುಟ್ಟುತ್ತವೆ. ಯಕ್ಷಗಾನದ ಮೂಲಕ ಪ್ರಸಿದ್ಧಿ ಪಡೆದ ಅರ್ಹರಿಗೆ ಪ್ರಶಸ್ತಿ ನೀಡುವುದು ಅರ್ತಪೂರ್ಣವಾಗಿದೆ. ಯಕ್ಷಗಾನದಲ್ಲಿ ಪೌರಾಣಿಕ ಪ್ರಸಂಗಗಳಲ್ಲಿ ಬರುವ ಅನೇಕ ರಕ್ಕಸರನ್ನು ನಾವು ಕಲೆಯ ಪ್ರೀತಿಯಿಂದ ನೋಡುತ್ತೇವೆ. ಇಂದಿಗೂ ದೇಶದಲ್ಲಿ ಅನೇಕ ಜಾತಿಯ ರಕ್ಕಸರು ಇದ್ದಾರೆ. ಸಜ್ಜನರಿಂದ ರಕ್ಕಸರ ಸಂಹಾರವೂ ಆಗುತ್ತಿರಬೇಕು. ಕಾನೂನಿನಲ್ಲಿ ಕಠಿಣತೆ ಇಲ್ಲದಿದ್ದರೆ…
ಮಾನವೀಯ ಮೌಲ್ಯಗಳನ್ನು ವೃದ್ಧಿಸಲು ಪ್ರವಚನ ಮಾಲಿಕೆ ಪೂರಕ – ಒಡಿಯೂರು ಶ್ರೀ
“ವಿಶ್ವ ಮಾನವ ಧರ್ಮದ ಪ್ರತಿಪಾದಕರಾಗಿ ದತ್ತಾತ್ರೇಯರು ಅವತರಿಸಿದರು. ಮಾನವೀಯ ಮೌಲ್ಯಗಳನ್ನು ವೃದ್ಧಿಸಲು ಪ್ರವಚನ ಮಾಲಿಕೆ ಪೂರಕ. ಅಂತರ್ಯದ ಕಡೆಗೆ ಗಮನಹರಿಸುವವರು ನಾವಾಗಬೇಕು. ಗುರುಗೀತೆ, ಅವಧೂತ ಗೀತೆಯಂತಹ ಕೃತಿಗಳು ನಮ್ಮ ಜೀವನಕ್ಕೆ ಅನುಕೂಲಕರವಾದ ವಿಚಾರವನ್ನು ತಿಳಿಸಿದೆ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದತ್ತ…
‘ಶ್ರೀ ಗುರುಚರಿತಾಮೃತ ಪ್ರವಚನ’ಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರಿಂದ ಚಾಲನೆ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಸಂದರ್ಭ ನಡೆದ ‘ಶ್ರೀ ಗುರುಚರಿತಾಮೃತ ಪ್ರವಚನ’ಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರಿಂದ ಚಾಲನೆ. ಸಾಧ್ವಿ ಶ್ರೀ ಮಾತಾನಂದಮಯೀ, ಪೂಜ್ಯ ಶ್ರೀಗಳವರ ಮಾತೃಶ್ರೀ ಶ್ರೀಮತಿ ಅಂತಕ್ಕೆ, ಪ್ರವಚನಕಾರರಾದ ಪ್ರೊ. ಚಂದ್ರಪ್ರಭಾ ಆರ್. ಹೆಗ್ಡೆ, ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ,…