“ಧೈರ್ಯದಿಂದ ಮುನ್ನಡೆದರೆ ಯಶಸ್ಸು ಖಂಡಿತ”
ಜಿಲ್ಲಾ ಮಟ್ಟದ ಒಳಾಂಗಣ ಮತ್ತು ಹೊರಾಂಗಣ ಸ್ಪರ್ಧೆಗಳನ್ನು
ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ
ಜು. 30: “ಸಮಾಜದಲ್ಲಿ ಮನುಷ್ಯ ಶಾಂತಿ, ನೆಮ್ಮದಿಗೆ ಬಯಸುವ ಕಾಲ ಬಂದಿದೆ. ಅಂತರಂಗದ ಬಾಗಿಲು ತೆರೆಯಬೇಕು. ಅಲ್ಲಿ ಆನಂದದ ಸೆಲೆ ಇರುತ್ತದೆ. ಸ್ಪರ್ಧೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇದೆ. ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯ ನಡೆಯಬೇಕು. ಧೈರ್ಯದಿಂದ ಮುನ್ನಡೆದರೆ ಯಶಸ್ಸು ಸಾಧ್ಯ. ದುರ್ಘಟನೆಗಳು ನಡೆಯದಂತೆ ನಾವೆಲ್ಲರೂ ಜಾಗರೂಕರಾಗಬೇಕುÀ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಗ್ರಾಮೋತ್ಸವ 2022ರ ಪ್ರಯುಕ್ತ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯು ಆಯೋಜಿಸಿದ್ದ ಜಿಲ್ಲಾ ಮಟ್ಟದ ಹೊರಾಂಗಣ ಮತ್ತು ಒಳಾಂಗಣ ಸ್ಪರ್ಧೆಗಳನ್ನು ದೀಪೋಜ್ವಲನಗೊಳಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾದ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಕೋಶಾಧಿಕಾರಿ ಗಳಾದ ಶ್ರೀ ಎ. ಸುರೇಶ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಶ್ರೀ ಪಿ. ಲಿಂಗಪ್ಪ ಗೌಡ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಶ್ರೀ ಕಿರಣ್ ಉರ್ವ, ತೀರ್ಪುಗಾರರಾದ ಶ್ರೀ ರವಿರಾಜ್ ಶೆಟ್ಟಿ ಒಡಿಯೂರು, ಶ್ರೀ ಸಾಯಿನಾರಾಯಣ ಕಲ್ಮಡ್ಕ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಅವಿನಾಶ್ ಶೆಟ್ಟಿ ಮತ್ತು ಶ್ರೀ ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶವಂತ ವಿಟ್ಲ ಸ್ವಾಗತಿಸಿದರು. ಕ್ರೀಡಾ ಸಮಿತಿಯ ಸಂಚಾಲಕ ಶ್ರೀ ಮಾತೇಶ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.