ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ 6ನೇ ತರಗತಿಯಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಶರದೃತು ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ. ಯೋಗ, ಧ್ಯಾನ, ಪ್ರಾಣಾಯಾಮ, ಚಿತ್ರಕಲೆ, ರಂಗಭೂಮಿ, ಕಾಗದದ ರಚನೆಗಳು, ಮುಖವಾಡ ತಯಾರಿ, ಕವನ ರಚನೆ, ಸ್ವರಾನುಕರಣೆ ಮುಂತಾದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ತರಬೇತಿಗಳನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳ ಮೂಲಕ ನೀಡಲಾಗುವುದು.