ಜೋಕುಲೆ ತುಳುಕೂಟ ಉದ್ಘಾಟನೆ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಜೋಕುಲೆ ತುಳುಕೂಟ ಉದ್ಘಾಟನೆ
“ಉರಿಯುವ ದೀಪದಂತೆ ತುಳುನಾಡಿನ ಸಂಸ್ಕøತಿಯು ಬೆಳಗಬೇಕು. ನಾವು ಕಾಣುವ, ಉಪಯೋಗಿಸುವ ಪ್ರತಿಯೊಂದು ವಸ್ತುವಿನ ಹೆಸರನ್ನು ತುಳುಭಾಷೆಯಲ್ಲಿ ಹೇಳಲು ಪ್ರಯತ್ನಿಸಬೇಕು. ಭಾಷೆ ಉಳಿದರೆ ಮಾತ್ರ ಸಂಸ್ಕøತಿಯ ಉಳಿವು. ತುಳುವಿನ ಬಗ್ಗೆ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು. ಪ್ರೀತಿಗೆ ಮತ್ತೊಂದು ಹೆಸರು ತುಳುಭಾಷೆ. ಅದು ಬೆಲ್ಲ ಮತ್ತು ನೀರಿನ ಸಂಬಂಧದ ಹಾಗೆ ಮಧುರವಾದುದು” ಎಂದು ಒಡಿಯೂರು ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಜೋಕುಲೆ ತುಳುಕೂಟವನ್ನು ಉದ್ಘಾಟಿಸಿ ಸಂದೇಶ ನೀಡಿದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಒಡಿಯೂರ್ದ ತುಳುಕೂಟದ ಅಧ್ಯಕ್ಷ ಶ್ರೀ ಯಶವಂತ ವಿಟ್ಲ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್.ರೈ ಶುಭಹಾರೈಸಿದರು. ಶಾಲಾ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ ಮಂದಾರ ರಾಮಾಯಣದ ಕೆಲವು ತುಣುಕುಗಳನ್ನು ಹಾಡಿದರು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಸುದೀಪ್ ಶೆಟ್ಟಿ ಸ್ವಾಗತಿಸಿ, ಕು| ಸನ್ನಿಧಿ ಪಕಳ ಕಾರ್ಯಕ್ರಮ ನಿರೂಪಿಸಿದರು. 9ನೇ ತರಗತಿ ವಿದ್ಯಾರ್ಥಿನಿ ಕು| ಸಾನಿಧ್ಯ ವಂದಿಸಿದರು.
ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ಸಂಪನ್ನಗೊಂಡಿತು.