ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕಾಸರಗೋಡು ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ
ಜ. 29: ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ 2021 – ಜ್ಞಾನವಾಹಿನಿ ಕಾರ್ಯಕ್ರಮದ ಕಾಸರಗೋಡು ವಲಯ ಸಮಿತಿ ಮತ್ತು ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಸಭಾಮಂಟಪದಲ್ಲಿ ಜರಗಿತು.ಕಾರ್ಯಕ್ರಮಕ್ಕೆ ಪೂಜ್ಯ ಸ್ವಾಮೀಜಿಗಳವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಲಯ ಸಮಿತಿ ಮತ್ತು ಸರಣಿ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಚಾಲನೆ ನೀಡಿ ಆಶೀರ್ವಚನಗೈದರು. ಇದೇ ಸಂದರ್ಭದಲ್ಲಿ ಮಧೂರು ದೇವಳದ ಗದ್ದೆಯಲ್ಲಿ ನಾಟಿ ಉತ್ಸವ ಜರಗಿತು. ಒಡಿಯೂರು ಶ್ರೀಗಳವರು ನಾಟಿ ಮಾಡುವ ಮೂಲಕ ನಾಟಿ ಉತ್ಸವಕ್ಕೆ ಚಾಲನೆ ನೀಡಿದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಶ್ರೀರಾಮ ತಾರಕ ಮಂತ್ರ ಹಾಗೂ ಹನುಮಾನ್ ಚಾಲೀಸಾ ಪಠಣ ನೆರವೇರಿಸಿದರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಆಶೀರ್ವಚನಗೈದರು. ಕಾಸರಗೋಡು ವಲಯ ಸಮಿತಿಯ ಅಧ್ಯಕ್ಷ ಶ್ರಿ ವೆಂಕಟರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಕೋಶಾಧಿಕಾರಿ ಶ್ರೀ ಎ. ಸುರೇಶ್ ರೈ, ಮಂಗಳೂರು ನಗರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ತಾರಾನಾಥ ಶೆಟ್ಟಿ ಬೋಳಾರ, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಗೋಪಾಲಕೃಷ್ಣ, ಮಧೂರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಂ. ಬಾಬು, ದೇವಸ್ಥಾನದ ಮುಖ್ಯ ಅರ್ಚಕ ಶ್ರೀ ಕೃಷ್ಣ ಉಪಾಧ್ಯಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಸರಗೋಡು ಯೋಜನಾಧಿಕಾರಿ ಚೇತನಾ ಎಂ., ಮಧೂರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯದೇವ ಖಂಡಿಗೆ, ಷಷ್ಠ್ಯಬ್ದ ಸಂಭ್ರಮ ಕಾಸರಗೋಡು ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶ್ರೀಲತಾ ಎಂ., ಕ್ಷೇತ್ರ ಸಂರಕ್ಷಣಾ ಸಮಿತಿ ರಾಜ್ಯ ಕಾರ್ಯದರ್ಶಿ ಶ್ರೀ ಎಂ .ಅಪ್ಪಯ್ಯ ನಾಯ್ಕ ಮಧೂರು ಇವರು ಉಪಸ್ಥಿತರಿದ್ದರು. ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಜಯಾನಂದಕುಮಾರ್ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಮ ಕಾಸರಗೋಡು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಶ್ರೀ ಕೆ. ಜಗದೀಶ್ ಕೂಡ್ಲು, ಶ್ರೀ ಶಂಕರ ಕೆ. ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುಪ್ರಸಾದ್ ಕೊಟೆಕಣಿ ವಂದಿಸಿದರು.