ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಅಕ್ಟೋಬರ 20ರಂದು ಮಂಗಳವಾರ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ – ಶ್ರೀ ಚಂಡಿಕಾ ಯಾಗವು ನಡೆಯಲಿರುವುದು. ಬೆಳಿಗ್ಗೆ ಮಂಗಳಾರತಿಯ ಬಳಿಕ ಶ್ರೀ ನಾಗದೇವರಿಗೆ ನಾಗತಂಬಿಲ. ಗಂಟೆ 9.30ಕ್ಕೆ ಶ್ರೀ ಚಂಡಿಕಾ ಯಾಗವು ಆರಂಭಗೊಂಡು ಮಧ್ಯಾಹ್ನ ಗಂಟೆ 12.00ಕ್ಕೆ ಯಾಗದ ಪೂರ್ಣಾಹುತಿ, ಮಹಾಮಂಗಳಾರತಿ, ಆರಾಧ್ಯದೇವರಿಗೆ ಮಹಾಪೂಜೆ. ಅಪರಾಹ್ಣ ಗಂಟೆ 2.30ರಿಂದ ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಶ್ರೀ ಡಿ. ಮನೋಹರಕುಮಾರ್ ಯಕ್ಷಬಳಗ, ಮಂಗಳೂರು ಇವರಿಂದ ‘ಶಾಂಭವಿ ವಿಜಯ’ ತುಳು ಯಕ್ಷಗಾನ ಬಯಲಾಟ. ರಾತ್ರಿ ಅಷ್ಟಾವಧಾನ ಸೇವೆ, ಮಹಾಪೂಜೆ.
ತಾ.24-10-2020ನೇ ಶನಿವಾರ ಶ್ರೀ ಶಾರದಾ ಪೂಜೆ- ಮಧ್ಯಾಹ್ನ ಶ್ರೀ ಸರಸ್ವತಿ ಹವನವು ನಡೆಯಲಿದೆ. ಅಪರಾಹ್ಣ ಆಯುಧ ಪೂಜೆ-ವಾಹನ ಪೂಜೆ ಜರಗಲಿದೆ. ಈ ಎಲ್ಲಾ ಕಾರ್ಯಕ್ರಮದ ಸಂದರ್ಭ ಸರಕಾರದ ಕೋವಿಡ್ 19ರ ನಿಯಮಗಳನ್ನು ಪಾಲಿಸಲಾಗುವುದು.