ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ವಿಟ್ಲ ವಲಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ

“ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ”
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಜರಗಿದ ವಿಟ್ಲ ಮಲಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಉದ್ಘಾಟಿಸಿ ಒಡಿಯೂರು ಶ್ರೀಗಳವರಿಂದ ಆಶೀರ್ವಚನ
“ಪ್ರತಿಯೊಂದು ಮಗುವಿನ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಎಲ್ಲರಲ್ಲೂ ಒಂದೇ ರೀತಿಯ ಪ್ರತಿಭೆಗಳಿರುವುದಿಲ್ಲ. ಪ್ರತಿಭೆಗಳು ಅರಳಲು ಇಂತಹ ವೇದಿಕೆ ಪೂರಕವಾಗಿದೆ. ಮಕ್ಕಳು ಜಗತ್ತನ್ನೇ ಬೆಳಗಿಸುವ ದೀಪಗಳಾಗಬೇಕು. ಸುಸಂಸ್ಕøತ ಶಿಕ್ಷಣದಿಂದ ನಾವೂ ಬದುಕುವ ಜೊತೆಗೆ ಅನ್ನರನ್ನೂ ಬದುಕಲು ಬಿಡುವುದು ಎಂಬ ಅರಿವು ಮೂಡುವುದು. ಸುಸಂಸ್ಕøತ ಜೀವನದಿಂದ ಬದುಕು ಆನಂದಮಯವಾಗುವುದು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಶ್ರೀ ಗುರುದೇವ ಆಂಗ್ಲ ಮಾಧ್ಯಮ ಶಾಳೆ ಒಡಿಯೂರು ಇದರ ಸಂಯುಕ್ತ ಆಶ್ರಯದಲ್ಲಿ ಜರಗಿದ ವಿಟ್ಲ ಮಲಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳದ ಶಿಕ್ಷಣ ಸಂಯೋಜಕಿ ಶ್ರೀಮತಿ ಸುಧಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಅನ್ವರ್ ಕರೋಪಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ವಲಯ ಸಂಪನ್ಮೂಲ ವ್ಯಕ್ತಿ ಶ್ರೀ ಚಂದ್ರಶೇಖರ್, ವಿಟ್ಲ ವಲಯದ ಪುಷ್ಪಾ, ವಿಟ್ಲ ವಲಯದ ಬಿಂದು, ಕಂಬಳಬೆಟ್ಟು ವಲಯದ ಜ್ಯೋತಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀ ರಘುನಾಥ ಶೆಟ್ಟಿ ಪಟ್ಲಗುತ್ತು ಇವರುಗಳು ಉಪಸ್ಥಿತರಿದ್ದರು.
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಗೊಂಡ ಸಮಾರಂಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್.ರೈ ಸ್ವಾಗತಿಸಿದರು. ಶಿಕ್ಷಕ ಶ್ರೀ ಶೇಖರ್ ಶೆಟ್ಟಿ ಬಾಯಾರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಶ್ರೀ ಗಣಪತಿ ಭಟ್ ಸೇರಾಜೆ ಪ್ರಸ್ತಾವನೆಗೈದು ವಂದನಾರ್ಪಣೆಗೈದರು.