ಗಣರಾಜ್ಯೋತ್ಸವ ಆಚರಣೆ
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಣುಕಾ ಎಸ್ ರೈ, ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಉದಯಕುಮಾರ್ ರೈ ಕಾರ್ಯಕ್ರಮ ನಿರ್ವಹಿಸಿದರು.