ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶತರುದ್ರಾಭಿಷೇಕ

ಶ್ರೀ ಸಂಸ್ಥಾನದಲ್ಲಿ ತಾ. 21-02-2020ನೇ ಶುಕ್ರವಾರ ರಾತ್ರಿ ಮಹಾ ಶಿವರಾತ್ರಿಯ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಆರಾಧ್ಯ ದೇವರಿಗೆ ಶತರುದ್ರಾಭಿಷೇಕ ನಡೆಯಲಿರುವುದು.

ತಾವೆಲ್ಲರೂ ಪಾಲ್ಗೊಂಡು ಆರಾಧ್ಯ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ. ಸೇವೆ ಮಾಡಲಿಚ್ಛಿಸುವವರು ಶ್ರೀ ಸಂಸ್ಥಾನದ ಸೇವಾವಿಭಾಗದಲ್ಲಿ ಹೆಸರು ನೋಂದಾಯಿಸಬಹುದು.