‘ಶ್ರೀ ಗುರುಚರಿತಾಮೃತ ಪ್ರವಚನ’ಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರಿಂದ ಚಾಲನೆ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಸಂದರ್ಭ ನಡೆದ ‘ಶ್ರೀ ಗುರುಚರಿತಾಮೃತ ಪ್ರವಚನ’ಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರಿಂದ ಚಾಲನೆ. ಸಾಧ್ವಿ ಶ್ರೀ ಮಾತಾನಂದಮಯೀ, ಪೂಜ್ಯ ಶ್ರೀಗಳವರ ಮಾತೃಶ್ರೀ ಶ್ರೀಮತಿ ಅಂತಕ್ಕೆ, ಪ್ರವಚನಕಾರರಾದ ಪ್ರೊ. ಚಂದ್ರಪ್ರಭಾ ಆರ್. ಹೆಗ್ಡೆ, ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಅಶೋಕ್‍ಕುಮಾರ್, ಒಡಿಯೂರು ಶ್ರೀ ವಿವಿಧೊದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ. ಸುರೇಶ್ ರೈ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಮುಂಬೈ ಘಟಕದ ಅಧ್ಯಕ್ಷೆ ಶ್ರೀಮತಿ ರೇವತಿ ವಿ.ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ ಉಪಸ್ಥಿತರಿದ್ದರು.