ಒಡಿಯೂರು ಶ್ರೀಗಳ ಸಂತಾಪ

ಮಡಿಯಾಳ ನಾರಾಯಣ ಭಟ್ಟರ ಬಳಿಕ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಆದುನಿಕ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಅನುಪಮ ತ್ಯಾಗಜೀವಿ ಶ್ರೀ ಯು. ಗಂಗಾಧರ ಭಟ್ ಅವರ ನಿಧನಕ್ಕೆ ವಿಷಾಧಿಸಿ, ಅಗಲಿದ ದಿವ್ಯಾತ್ಮಕ್ಕೆ ಆರಾಧ್ಯದೇವರು ಚಿರಶಾಂತಿಯನ್ನು ಕರುಣಿಸಲೆಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಪ್ರಾರ್ಥಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.